Home ರಾಜಕೀಯ ಸಮಾಚಾರ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ಶಾಸಕ ಹರೀಶ್ ಪೂಂಜ ಭೇಟಿ: ದುಷ್ಕರ್ಮಿಗಳ ವಿರುದ್ಧ ಕಟ್ಟುನಿಟ್ಟಿನ...

ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ಶಾಸಕ ಹರೀಶ್ ಪೂಂಜ ಭೇಟಿ: ದುಷ್ಕರ್ಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ

0

ಬೆಳ್ತಂಗಡಿ.ಅ.08
ನಿನ್ನೆ ಸಮಾಜಘಾತಕ ಶಕ್ತಿಗಳಿಂದ ಬೆಂಕಿಗಾಹುತಿಯಾಗಿದ್ದ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ಶಾಸಕ ಹರೀಶ್ ಪೂಂಜ ಅವರು ಇಂದು ಭೇಟಿ ನೀಡಿ, ಘಟನೆಯ ಕುರಿತು ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಘಟನೆ ಬಗ್ಗೆ ತೀವ್ರ ಬೇಸರ ಹಾಗೂ ಆಕ್ರೋಶ ವ್ಯಕ್ತಪಡಿಸಿದ ಶಾಸಕರು, ಸಾರ್ವಜನಿಕರ ಆರೋಗ್ಯ ಸೇವೆಗೆ ಮೀಸಲಾಗಿರುವ ಸಂಸ್ಥೆಯ ಮೇಲೆ ಈ ರೀತಿಯ ದಾಳಿ ನಡೆಸಿರುವುದು ಅತ್ಯಂತ ಖಂಡನೀಯ. ಸಮಾಜ ಸೇವೆ ಹಾಗೂ ಸಾರ್ವಜನಿಕರ ಆರೋಗ್ಯ ಸೇವೆಗೆ ಕಾರ್ಯನಿರ್ವಹಿಸುವ ಸ್ಥಳಗಳ ಮೇಲೆ ಇಂತಹ ದುಷ್ಕೃತ್ಯ ಎಸಗುವುದು ಅಕ್ಷಮ್ಯ ಎಂದು ಹೇಳಿದರು.

ಘಟನೆಯ ಕುರಿತು ಸಮಗ್ರ ಹಾಗೂ ಪಾರದರ್ಶಕ ತನಿಖೆ ನಡೆಸಿ, ಕೃತ್ಯದ ಹಿಂದೆ ಇರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಪತ್ತೆಹಚ್ಚಿ ಬಂಧಿಸಬೇಕು. ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಪ್ರಮುಖರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version