Home ರಾಜಕೀಯ ಸಮಾಚಾರ ಮತಗಳ್ಳತನ ಹಾಗೂ ಪೊಲೀಸ್ ದಬ್ಬಾಳಿಕೆ ಖಂಡಿಸಿ ಬೆಳ್ತಂಗಡಿಯಲ್ಲಿ ಬ್ಲಾಕ್ ಕಾಂಗ್ರೆಸ್‌ನಿಂದ ಕಪ್ಪು ಪಟ್ಟಿ ಧರಿಸಿ ತುರ್ತು...

ಮತಗಳ್ಳತನ ಹಾಗೂ ಪೊಲೀಸ್ ದಬ್ಬಾಳಿಕೆ ಖಂಡಿಸಿ ಬೆಳ್ತಂಗಡಿಯಲ್ಲಿ ಬ್ಲಾಕ್ ಕಾಂಗ್ರೆಸ್‌ನಿಂದ ಕಪ್ಪು ಪಟ್ಟಿ ಧರಿಸಿ ತುರ್ತು ಪ್ರತಿಭಟನೆ

0

ಬೆಳ್ತಂಗಡಿ: ಕೇಂದ್ರ ಸರ್ಕಾರ, ಬಿಜೆಪಿ ಹಾಗೂ ಚುನಾವಣಾ ಆಯೋಗದ ಜನವಿರೋಧಿ ಧೋರಣೆಯನ್ನು ಖಂಡಿಸಿ ಮತ್ತು ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಚುನಾಯಿತ ಜನಪ್ರತಿನಿಧಿಗಳ ಮೇಲಿನ ಪೊಲೀಸ್ ದಬ್ಬಾಳಿಕೆಯನ್ನು ವಿರೋಧಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ (ನಗರ ಮತ್ತು ಗ್ರಾಮೀಣ ಸಮಿತಿ) ವತಿಯಿಂದ ಗುರುವಾರ ಮೂರು ಮಾರ್ಗದ ಬಳಿ ಕಪ್ಪು ಪಟ್ಟಿ ಧರಿಸಿ ಬೃಹತ್ ತುರ್ತು ಪ್ರತಿಭಟನೆ ನಡೆಯಿತು.
ಎಐಸಿಸಿ, ಕೆಪಿಸಿಸಿ ಹಾಗೂ ಜಿಲ್ಲಾ ಕಾಂಗ್ರೆಸ್ ಕಮಿಟಿಯ ನಿರ್ದೇಶನದಂತೆ “ಮತ ಉಳಿಸಿ… ದೇಶ ಉಳಿಸಿ…” ಎಂಬ ಧೈಯವಾಕ್ಯದೊಂದಿಗೆ ಈ ಹೋರಾಟವನ್ನು ಆಯೋಜಿಸಲಾಗಿತ್ತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ಮುಖಂಡರು, “ಕೇಂದ್ರದ ಬಿಜೆಪಿ ಸರ್ಕಾರವು ಚುನಾವಣಾ ಆಯೋಗವನ್ನು ತನ್ನ ಕಾಸಿನ ಗಿಡದಂತೆ ಬಳಸಿಕೊಳ್ಳುತ್ತಾ ಪ್ರಜಾಪ್ರಭುತ್ವದ ಮೂಲ ತತ್ವವಾದ ಮತದಾನ ವ್ಯವಸ್ಥೆಯಲ್ಲೇ ಅಕ್ರಮ ಎಸಗಲು ಯತ್ನಿಸುತ್ತಿದೆ. ಚುನಾವಣಾ ಅಕ್ರಮಗಳ ವಿರುದ್ಧ ಧ್ವನಿ ಎತ್ತುತ್ತಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಶಾಸಕರ ಮೇಲೆ ಪೊಲೀಸ್ ಬಲ ಪ್ರಯೋಗಿಸಿ ಧ್ವನಿ ಅಡಗಿಸುವ ಕೃತ್ಯಕ್ಕೆ ಇಳಿದಿರುವುದು ಖಂಡನೀಯ,” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷವು ಬೂತ್ ಹಂತದಿಂದ ಹಿಡಿದು ರಾಷ್ಟ್ರ ಮಟ್ಟದವರೆಗೆ ಈ ಹೋರಾಟವನ್ನು ನಿರಂತರವಾಗಿ ಮುಂದುವರಿಸಲಿದೆ” ಎಂದು ನಾಯಕರು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫರ್ನಾಂಡಿಸ್, ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್, ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಝೀನತ್ ಉಜಿರೆ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹಕಿಮ್ ಕೊಕ್ಕಡ, ಯುವ ಕಾಂಗ್ರೆಸ್ ಬೆಳ್ತಂಗಡಿ ನಗರ ಸಮಿತಿ ಅಧ್ಯಕ್ಷರಾದ ನವೀನ್ ಗೌಡ, ಉಪಾಧ್ಯಕ್ಷರಾದ ಅರುಣ್ ಫೆರ್ನಾಂಡಿಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಅಝರ್ ನಾವುರೂ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಪ್ರಚಾರ ಸಮಿತಿಯ ಅಧ್ಯಕ್ಷರಾದ ಜೆರಲ್ಡ್ ಕೊರೆಯ, ಮಾಜಿ ತಾಲೂಕ ಪಂಚಾಯತ್ ಸದಸ್ಯರಾದ ವಿನ್ಸೆಂಟ್ ಡಿಸೋಜಾ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರುಗಳಾದ ಕರೀಮ್ ಗೇರ್ ಕಟ್ಟೆ, ಸೆಬಾಸ್ಟಿಯನ್ ಪಿ.ಟಿ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಉಮೈರ ಬಾನು, ಪಕ್ಷದ ಪ್ರಮುಖರಾದ ಜೋಸೆಫ್ ಎಜೆ, ಪ್ರಮೋದ್ ಮಚ್ಚಿನ, ಸುಧೀರ್ ಶೆಟ್ಟಿ, ಅಬ್ದುಲ್ ರೆಹಮಾನ್ ಕುಂಟಿನಿ, ಅರುಣ್ ಮತ್ತಿಲ್ಲ ಧರ್ಮಸ್ಥಳ, ಕಲಂದರ್ ಕೊಕ್ಕಡ, ಸುರೇಶ್ ಇಂಚರ, ಪಕ್ಷದ ಬೂತ್, ಗ್ರಾಮ, ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪದಾಧಿಕಾರಿಗಳು, ವಿವಿಧ ಸರ್ಕಾರಿ ಸಮಿತಿಗಳ ನಾಮನಿರ್ದೇಶಿತ ಸದಸ್ಯರು ಹಾಗೂ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version