ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಶಿವಪ್ರಸಾದ್‌ಗೆ ಸೇರಿದ ಮನೆ ಹಾಗೂ ಕೊಟ್ಟಿಗೆ ಪರಿಸರವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
2026ರ ಅಕ್ಟೋಬರ್ 5ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಕ್ರಮ ಗೋಸಾಗಾಟಕ್ಕೆ ಸಂಬಂಧಿಸಿದಂತೆ ಠಾಣೆಯಲ್ಲಿ ಅ.ಕ್ರ. 125/2026ರಂತೆ ಪ್ರಕರಣ ದಾಖಲಾಗಿತ್ತು. ಆರೋಪಿತ ಶಿವಪ್ರಸಾದ್ ತನ್ನ ಮನೆಯಲ್ಲಿದ್ದ ಜಾನುವಾರುಗಳನ್ನು ಅಗತ್ಯ ದಾಖಲೆಪತ್ರಗಳನ್ನು ಪಡೆಯದೇ ಅಕ್ರಮವಾಗಿ ಮಾರಾಟ ಮಾಡಿರುವ ಹಿನ್ನೆಲೆಯಲ್ಲಿ, ನಿಯಮಾನುಸಾರ ಕ್ರಮ ಕೈಗೊಂಡ ಪೊಲೀಸರು ಅಕ್ಟೋಬರ್ 8ರಂದು ಆರೋಪಿತನ ಮನೆ ಹಾಗೂ ಕೊಟ್ಟಿಗೆ ಪರಿಸರವನ್ನು ಜಪ್ತಿ ಮಾಡಿದ್ದಾರೆ.
