Home ಅಪಘಾತ ಮಂಗಳೂರು; ಬೀಚ್ ನಲ್ಲಿ ಈಜಲು ತೆರಳಿದ್ದ   ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿ ಶೋಭಿತ್ ಮೃತ್ಯು

ಮಂಗಳೂರು; ಬೀಚ್ ನಲ್ಲಿ ಈಜಲು ತೆರಳಿದ್ದ   ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿ ಶೋಭಿತ್ ಮೃತ್ಯು

0

ಮಂಗಳೂರು;  ಸೋಮೇಶ್ವರದ ಪೆರಿಬೈಲ್ ಬೀಚ್‌ಗೆ  ತೆರಳಿದ್ದ ವೇಳೆ ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಮ್ಮರಡಿ ನಿವಾಸಿ ಶೋಭಿತ್ ಎಂ. ಗೌಡ (18) ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದ್ದರು.  ಸೋಮವಾರ (ಅಕ್ಟೋಬರ್ 12) ನಾಪತ್ತೆಯಾಗಿದ್ದ ಸ್ಥಳದಲ್ಲೇ ಶೋಭಿತ್ ಮೃತದೇಹ ಪತ್ತೆಯಾಗಿದೆ.

ಕುತ್ತಾರಿನ ಕೊರಗಜ್ಜನ ಸನ್ನಿಧಾನಕ್ಕೆ ಬಂದಿದ್ದ ಒಂಬತ್ತು ವಿದ್ಯಾರ್ಥಿಗಳ ತಂಡವು ಬಳಿಕ ಸೋಮೇಶ್ವರದ ಪೆರಿಬೈಲ್ ಬೀಚ್‌ಗೆ ತೆರಳಿತ್ತು. ಈ ವೇಳೆ ಶೋಭಿತ್ ಹಾಗೂ ಆಕಾಶ್ ಸಮುದ್ರಕ್ಕಿಳಿದಿದ್ದು, ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು. ತಕ್ಷಣ ಎಚ್ಚೆತ್ತುಕೊಂಡ ಆಕಾಶ್ ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದರೆ, ಶೋಭಿತ್ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಘಟನೆ ನಡೆದ ತಕ್ಷಣವೇ ಎಸ್‌ಡಿಆರ್‌ಎಫ್ (SDRF), ಕರಾವಳಿ ಕಾವಲು ಪಡೆ, ಗೃಹರಕ್ಷಕ ದಳ ಹಾಗೂ ಉಳ್ಳಾಲ ಪೊಲೀಸರು ಜಂಟಿಯಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಕೊನೆಗೆ ಉಳ್ಳಾಲ ಕೋಟೆಪುರದ ಮೀನುಗಾರರ ನೆರವಿನೊಂದಿಗೆ ದೋಣಿಯ ಮೂಲಕ ಶೋಭಿತ್ ಅವರ ಮೃತದೇಹವನ್ನು ದಡಕ್ಕೆ ತರಲಾಗಿದೆ. ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ.

NO COMMENTS

LEAVE A REPLY

Please enter your comment!
Please enter your name here

Exit mobile version