Home ಅಪಘಾತ ಸುಳ್ಯ; ಮೀನು ಹಿಡಿಯುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಇಬ್ಬರು ಯುವಕರು ಮೃತ್ಯು, ತೋಟದ ಮಾಲಿಕನ ವಿರುದ್ದ...

ಸುಳ್ಯ; ಮೀನು ಹಿಡಿಯುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಇಬ್ಬರು ಯುವಕರು ಮೃತ್ಯು, ತೋಟದ ಮಾಲಿಕನ ವಿರುದ್ದ ಪ್ರಕರಣ ದಾಖಲು

0

ಸುಳ್ಯ: ತೋಡಿನಲ್ಲಿ ಮೀನು ಹಿಡಿಯುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಇಬ್ಬರು ಯುವಕರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ, ತೋಟಕ್ಕೆ ಅನಧಿಕೃತವಾಗಿ ವಿದ್ಯುತ್ ಅಳವಡಿಸಿದ್ದ ಮಾಲೀಕ ಮಧುಸೂದನ್ ಭಟ್ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಟೋಬ‌ರ್ 12ರಂದು ಕಲ್ಮಡ್ಕ ಗ್ರಾಮದ ಹೊಳೆಕ್ಕೆರೆ ತೋಡಿನಲ್ಲಿ ಮೀನು ಹಿಡಿಯುತ್ತಿದ್ದಾಗ ಈ ದುರಂತ ಸಂಭವಿಸಿತ್ತು. ಘಟನೆಯಲ್ಲಿ ಕಲ್ಮಡ್ಕದ ಭರತ್ (28) ಹಾಗೂ ಬೆಳ್ತಂಗಡಿಯ ರಮೇಶ್ ಅಲಿಯಾಸ್ ಗಣೇಶ್ (36) ಮೃತಪಟ್ಟಿದ್ದು, ಜೊತೆಗಿದ್ದ ಅಪ್ರಾಪ್ತ ಬಾಲಕ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮಧುಸೂದನ್ ಭಟ್ ತಮ್ಮ ತೋಟಕ್ಕೆ ಅನಧಿಕೃತವಾಗಿ ವಿದ್ಯುತ್ ಅಳವಡಿಸಿದ್ದರಿಂದಲೇ ಈ ದುರ್ಘಟನೆ ನಡೆದಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಬೆಳ್ಳಾರೆ ಠಾಣೆಯಲ್ಲಿ ಬಿಎನ್‌ಎಸ್ ಕಲಂ 105 ಹಾಗೂ ವಿದ್ಯುತ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version