Home ಅಪರಾಧ ಲೋಕ ಬೆಳ್ತಂಗಡಿ : ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಮಹಾರಾಷ್ಟ್ರದಲ್ಲಿ ಬಂಧನ

ಬೆಳ್ತಂಗಡಿ : ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಮಹಾರಾಷ್ಟ್ರದಲ್ಲಿ ಬಂಧನ

0

ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆಗೆ ಬೆದರಿಕೆ ಹಾಕಿದ ಪ್ರಕರಣವೊಂದರಲ್ಲಿ ಕಳೆದ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಿಂದ ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ದಿ.ಕೃಷ್ಣಪ್ಪ ಪೂಜಾರಿ ಮಗ ರವಿಕುಮಾರ್(32) ಎಂದು ಗುರುತಿಸಲಾಗಿದೆ.

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ 2021ರಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 70/2021ರ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ ಕಲಂ 341, 504, 506, 354(B), 427 ಹಾಗೂ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವು ಬಂಟ್ವಾಳದ ಮಾನ್ಯ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಸಿಸಿ ಸಂಖ್ಯೆ 20/2022ರಡಿ ವಿಚಾರಣೆಯಲ್ಲಿತ್ತು.ನ್ಯಾಯಾಲಯದ ವಾರೆಂಟ್ ಜಾರಿಯಾಗಿದ್ದರೂ ಆರೋಪಿ ಸುಮಾರು ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದನು.

ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ಆತನನ್ನು ಅ.12 ರಂದು ಪತ್ತೆಹಚ್ಚಿ ಬಂಧಿಸಿದ್ದಾರೆ.

ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ರೋಹಿಣಿ.ಸಿ.ಕೆ ಹಾಗೂ ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್. ಅವರ ಮಾರ್ಗದರ್ಶನದಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜೇಶ್ ಕೆ.ವಿ ನೇತೃತ್ವದ ಠಾಣೆಯ ಹೆಡ್ ಕಾನ್‌ಸ್ಟೆಬಲ್ ರಾಜೇಶ್,ಪೊಲೀಸ್ ಕಾನ್‌ಸ್ಟೆಬಲ್ ಚೋಳಪ್ಪ ಸಂಶಿ, ನಾಗರಾಜ್ ಅವರು ಬಂಧನ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಬೆಳ್ತಂಗಡಿ ಉಪವಿಭಾಗ ಕಚೇರಿಯ ರಾಜೇಶ್ ಹಾಗೂ ಜಿಲ್ಲಾ ಗಣಕಯಂತ್ರ ವಿಭಾಗದ ಸಂಪತ್ ಕುಮಾರ್ ಮತ್ತು ದಿವಾಕರ್ ಅವರು ಕಾರ್ಯಾಚರಣೆಗೆ ಸಹಕರಿಸಿದ್ದಾರೆ.

ಬಂಧಿತ ಆರೋಪಿಯನ್ನು ಅ.13 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ಆರು ದಿನಗಳ ನ್ಯಾಯಾಂಗ ಬಂಧನ ವಿಧಿಸಿ, ಮುಂದಿನ ವಿಚಾರಣೆಯ ದಿನಾಂಕವನ್ನು ಅ.19 ಕ್ಕೆ ಮುಂದೂಡಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version