Home ಅಪರಾಧ ಲೋಕ ಕುದುರೇಮುಖ ರಾಷ್ಟ್ರೀಯ ಉದ್ಯಾನ ವನದೊಳಗೆ ಮರ ಕಡಿದ ಪ್ರಕರಣ ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ...

ಕುದುರೇಮುಖ ರಾಷ್ಟ್ರೀಯ ಉದ್ಯಾನ ವನದೊಳಗೆ ಮರ ಕಡಿದ ಪ್ರಕರಣ ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

1
0

ಬೆಳ್ತಂಗಡಿ : ಕುದುರೇಮುಖ ರಾಷ್ಟ್ರೀಯ ಉದ್ಯಾನವನದ ವನ್ಯಜೀವಿ ವಿಭಾಗಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು ಮಾಡಿದ್ದ ಪ್ರಕರಣವನ್ನು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೊರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್ ಎಂಬಾತನೇ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು ಆತನ ವಿರುದ್ದ ಪ್ರಕರಣ‌ ದಾಖಲಿಸಲಾಗಿದೆ.
ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಬಲ್ತಾರ ಎಂಬಲ್ಲಿ ವನ್ಯಜೀವಿ ವಿಭಾಗಕ್ಕೆ ಸೇರಿದ ಕಾಡಿನೊಳಗೆ ಅಕ್ರಮವಾಗಿ ಪ್ರವೇಶ ಮಾಡಿ ಹಲಸಿನ ಮರಗಳನ್ನು ಕಡಿದು ದಾಸ್ತಾನು ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿ ಶರ್ಮಿಷ್ಠಾ ನೇತೃತ್ವದ ತಂಡ ಅ.13 ರಂದು ಸ್ಥಳಕ್ಕೆ ದಾಳಿ ಮಾಡಿದ್ದಾರೆ‌.

ದಾಳಿ ವೇಳೆ 6 ಹಲಸಿನ ಮರದ ತುಂಡುಗಳು ಹಾಗೂ ಒಂದು ಹಲಸಿನ ಮರದ ದಿಮ್ಮಿಯನ್ನು ಸ್ಥಳದಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ. ಇಲಾಖೆಯವರು ಬೆಳ್ತಂಗಡಿ ನ್ಯಾಯಾಲಯದ ಅನುಮತಿ ಪಡೆದುಕೊಂಡು ಅ.14 ರಂದು ವನ್ಯಜೀವಿ ರಕ್ಷಣೆ ಕಾಯ್ದೆ 27,29,35,50,51,55 ಅಡಿಯಲ್ಲಿ
ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೊರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಇತರರು ಭಾಗಿಗಳಾಗಿರುವ ಅನುಮಾನವಿದ್ದು ಎಸಿಎಫ್ ನೇತೃತ್ವದಲ್ಲಿ ಪ್ರಕರಣದ‌ಬಗ್ಗೆ ತನಿಖೆ ನಡೆಸಲಾಗುತ್ತಿದೆ.

LEAVE A REPLY

Please enter your comment!
Please enter your name here