Home ರಾಜಕೀಯ ಸಮಾಚಾರ ನಾವೂರು ಪ್ರಕರಣ ಕಾಂಗ್ರೆಸ್ ಪಕ್ಷ ಹಾಗೂ ನಾಯಕರ ವಿರುದ್ಧ ಅಪಪ್ರಚಾರಕ್ಕೆ ಯುವ ಕಾಂಗ್ರೆಸ್ ನಿಂದ ಪೊಲೀಸ್...

ನಾವೂರು ಪ್ರಕರಣ ಕಾಂಗ್ರೆಸ್ ಪಕ್ಷ ಹಾಗೂ ನಾಯಕರ ವಿರುದ್ಧ ಅಪಪ್ರಚಾರಕ್ಕೆ ಯುವ ಕಾಂಗ್ರೆಸ್ ನಿಂದ ಪೊಲೀಸ್ ಠಾಣೆಗೆ ದೂರು

0

ಬೆಳ್ತಂಗಡಿ: ತಾಲೂಕಿನ ನಾವುರಿನಲ್ಲಿ ಇತ್ತೀಚೆಗೆ ನಡೆದ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಅಹಿತಕರ ಘಟನೆಯನ್ನು ಬಂಡವಾಳ ಮಾಡಿಕೊಂಡು, ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರ ವರ್ಚಸ್ಸಿಗೆ ಮಸಿ ಬಳಿಯಲು ವ್ಯವಸ್ಥಿತ ಸಂಚು ರೂಪಿಸಲಾಗಿದೆ ಎಂದು ಬೆಳ್ತಂಗಡಿ ಯುವ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿ , ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ , ರಕ್ಷಿತ್ ಶಿವರಾಂ ರವರಿಗೆ ಸಂಬಂಧ ಕಲ್ಪಿಸಿ ಸಾಮಾಜಿಕ ಜಾಲತಾಣ ಫೇಸ್‌ಬುಕ್ , ವಾಟ್ಸಾಪ್ , ಇನ್‌ಸ್ಟಾಗ್ರಾಮ್ ಗಳಲ್ಲಿ ನಿರಂತರವಾಗಿ ಸುಳ್ಳು ಹಾಗೂ ಅವಹೇಳನಕಾರಿ ಸಂದೇಶಗಳನ್ನು ಹರಡುತ್ತಿರುವ ಕಿಡಿಗೇಡಿಗಳ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ದೂರು ನೀಡಲಾಗಿದೆ.
‘ಶ್ರೀ ಹರೀಶ್ ಪೂಂಜಾ ಅಭಿಮಾನಿ ಬಳಗ ಕರ್ನಾಟಕ’ ಹೆಸರಿನ ಫೇಸ್‌ಬುಕ್ ಪೇಜ್‌ ಹಾಗೂ ಇದೇ ಬಳಗದ ಹೆಸರಿನಲ್ಲಿರುವ ವಿವಿಧ ವಾಟ್ಸಾಪ್ ಗ್ರೂಪ್‌ಗಳು ಮತ್ತು ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ಗಳ ಮೂಲಕ, ಹಾಗೂ ಬ್ರೇಕಿಂಗ್ ನ್ಯೂಸ್ ವಾಟ್ಸಪ್ ಗ್ರೂಪ್ ಗಳಲ್ಲಿ ನಾವೂರು ಪ್ರಕರಣಕ್ಕೂ ಕಾಂಗ್ರೆಸ್ ನಾಯಕರಿಗೂ ಇಲ್ಲದ ಸಲ್ಲದ ಲಿಂಕ್ ಕಲ್ಪಿಸಿ, ಉದ್ದೇಶಪೂರ್ವಕ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಯುವ ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ. ಯಾವುದೇ ಸಾಕ್ಷಿ , ಆಧಾರಗಳಿಲ್ಲದೆ ಫೇಸ್‌ಬುಕ್, ವಾಟ್ಸಾಪ್ ಹಾಗೂ ಇನ್‌ಸ್ಟಾಗ್ರಾಮ್‌ನಂತಹ ಪ್ರಮುಖ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ನಾಯಕರ ವಿರುದ್ಧ ನಿರಂತರವಾಗಿ ಸುಳ್ಳು ಪೋಸ್ಟ್ ಹರಡಲಾಗುತ್ತಿದೆ. ಇದು ಶಾಸಕ ಹರೀಶ್ ಪೂಂಜಾ ಅವರ ಅಭಿಮಾನಿ ಬಳಗದ ಹೆಸರಿನಲ್ಲಿ ನಡೆಯುತ್ತಿರುವ ಅಗ್ಗದ ಹಾಗೂ ಕೀಳು ಮಟ್ಟದ ರಾಜಕೀಯ.
ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಪಕ್ಷದ ತೇಜೋವಧೆಗೆ ಯತ್ನಿಸುತ್ತಿರುವ ಹಾಗೂ ವಾಟ್ಸಾಪ್, ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಮೂಲಕ ಸುಳ್ಳು ಸುದ್ದಿ ಹರಡುತ್ತಿರುವ ‘ಶ್ರೀ ಹರೀಶ್ ಪೂಂಜಾ ಅಭಿಮಾನಿ ಬಳಗ ಕರ್ನಾಟಕ’ ಹೆಸರಿನ ಎಲ್ಲ ಸೋಶಿಯಲ್ ಮೀಡಿಯಾ ಅಕೌಂಟ್‌ಗಳನ್ನು ತಕ್ಷಣವೇ ನಿರ್ಬಂಧಿಸಬೇಕು ಜತೆಗೆ, ಇವುಗಳನ್ನು ನಿರ್ವಹಿಸುತ್ತಿರುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ಧ ಸೈಬರ್ ಕ್ರೈಮ್ ಕಾಯ್ದೆಯಡಿ ಸೂಕ್ತ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಯುವ ಕಾಂಗ್ರೆಸ್ ಬೆಳ್ತಂಗಡಿ ಘಟಕವು ಪೊಲೀಸರನ್ನು ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಬ್ಲಾಕ್ ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ನವೀನ್ ಕುಮಾರ್ ಗೌಡ , ತಾಲೂಕು ಯುವ ಕಾಂಗ್ರೆಸ್ ಉಪಾಧ್ಯಕ್ಷ ಅರುಣ್ ಲೋಬೋ , ಯುವ ಕಾಂಗ್ರೆಸ್ ಮುಖಂಡರಾದ ಗಣೇಶ್ ಕಣಿಯೂರು , ಅರುಣ್ ಪಿಂಟೊ ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version