Home ಅಪರಾಧ ಲೋಕ ವೇಣೂರು: ಕೋಳಿ ಅಂಕಕ್ಕೆ ದಾಳಿ – ನಾಲ್ವರು ಆರೋಪಿಗಳ ವಶಕ್ಕೆ7 ಅಂಕದ ಕೋಳಿಗಳು, 3 ದ್ವಿಚಕ್ರ...

ವೇಣೂರು: ಕೋಳಿ ಅಂಕಕ್ಕೆ ದಾಳಿ – ನಾಲ್ವರು ಆರೋಪಿಗಳ ವಶಕ್ಕೆ7 ಅಂಕದ ಕೋಳಿಗಳು, 3 ದ್ವಿಚಕ್ರ ವಾಹನ ಹಾಗೂ ಆಟೋರಿಕ್ಷಾ ವಶ

0

ಬೆಳ್ತಂಗಡಿ: ಅಂಡಿಂಜೆ ಗ್ರಾಮದ ಕಾಣಲಚ್ಚಿ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳನ್ನು ಮೋಹನ ಗೌಡ (45), ದಿನೇಶ್ (45), ಪ್ರಶಾಂತ್ (35) ಹಾಗೂ ಧೀರಜ್ ಎಂಬವರಾಗಿದ್ದಾರೆ.

ಅಕ್ಟೋಬರ್ 18ರಂದು ಮಧ್ಯಾಹ್ನ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ವೇಣೂರು ಪೊಲೀಸ್ ಠಾಣೆಯ ಪಿಎಸ್‌ಐ ಅಕ್ಷಯ ಡವಗಿ ಅವರಿಗೆ ಲಭಿಸಿದ ಮಾಹಿತಿಯಂತೆ ಪೊಲೀಸರು ಇಲ್ಲಿಗೆ ದಾಳಿ ನಡೆಸಿದ್ದು ಈವೇಳೆ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿರುವುದು ದೃಢಪಟ್ಟಿದೆ.
ಪೊಲೀಸರು ದಾಳಿ ನಡೆಸಿದ ವೇಳೆ ಕೆಲವರು ಪರಾರಿಯಾಗಿದ್ದು, ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ.

ಸ್ಥಳದಲ್ಲಿದ್ದ 7 ಅಂಕದ ಕೋಳಿಗಳು, 3 ದ್ವಿಚಕ್ರ ವಾಹನಗಳು ಹಾಗೂ ಒಂದು ಆಟೋರಿಕ್ಷಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 72/2026ರಂತೆ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 87, 93, ಪ್ರಾಣಿ ಹಿಂಸೆ ತಡೆ ಕಾಯ್ದೆ 1960ರ ಕಲಂ 3, 11(1)(m)(ii), 11(1)(n) ಹಾಗೂ ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 112ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version