Home ಅಪಘಾತ ನೆಲ್ಯಾಡಿಯಲ್ಲಿ ಭೀಕರ ಅಪಘಾತ; ಟ್ಯಾಂಕರ್‌ಗೆ ಕಾರು ಡಿಕ್ಕಿ ವಿದ್ಯಾರ್ಥಿ ಮೃತ್ಯು

ನೆಲ್ಯಾಡಿಯಲ್ಲಿ ಭೀಕರ ಅಪಘಾತ; ಟ್ಯಾಂಕರ್‌ಗೆ ಕಾರು ಡಿಕ್ಕಿ ವಿದ್ಯಾರ್ಥಿ ಮೃತ್ಯು

2
0

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಕರ್ಬಸಂಕದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 16 ವರ್ಷದ ವಿದ್ಯಾರ್ಥಿಯೊಬ್ಬರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಮೃತರನ್ನು ನೆಲ್ಯಾಡಿಯಲ್ಲಿ ಕಾರ್ಯಾಚರಿಸುತ್ತಿರುವ ಪ್ಲವರ್ಸ್ ಹೋಟೆಲ್ ಮಾಲಕ ಜೋಜೋ ಟಿ ಜೋರ್ಜ್ ಅವರ ಪುತ್ರ, ಪುತ್ತೂರಿನ ಸಂತ ಫಿಲೋಮಿನ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅನ್ವಿನ್ ಜೋಜೋ ಜೋರ್ಜ್ (16) ಎಂದು ಗುರುತಿಸಲಾಗಿದೆ.
ಗುರುವಾರ ಮುಂಜಾನೆ ಸುಮಾರು 1 ಗಂಟೆಯ ವೇಳೆಗೆ ನೆಲ್ಯಾಡಿ ಕರ್ಬಸಂಕದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್‌ ಟ್ಯಾಂಕರ್‌ಗೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಅನ್ವಿನ್ ಜೋಜೋ ಜೋರ್ಜ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಅಪಘಾತಕ್ಕೆ ಕಾರಣವೇನು ಎಂಬುದರ ಬಗ್ಗೆ ಇನ್ನಷ್ಟೇ ತಿಳಿದುಬರಬೇಕಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here