Home ಅಪರಾಧ ಲೋಕ ವೇಣೂರಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಆರೋಪ:  ಆರೋಪಿ ಬಂಧನ

ವೇಣೂರಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಆರೋಪ:  ಆರೋಪಿ ಬಂಧನ

0

ಬೆಳ್ತಂಗಡಿ: ಪರಿಶಿಷ್ಟ ಜಾತಿಗೆ ಸೇರಿದ ಯುವತಿಗೆ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ಮಾತನಾಡಿ, ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ (61) ಎಂಬಾತನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.
ಅ 24 ರಂದು ಮಧ್ಯಾಹ್ನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯು ಕೆಲಸ ಮಾಡುತ್ತಿದ್ದ ವೇಳೆ, ಅಲ್ಲಿಗೆ ದ್ವಿಚಕ್ರ ವಾಹನದಲ್ಲಿ ಬಂದ ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ (61) ಎಂಬಾತ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಯುವತಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ಅದರಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 75(1)(ii), 75(1)(iv), 79 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ತಿದ್ದುಪಡಿ ಕಾಯ್ದೆ 2015ರ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version