Home ಅಪರಾಧ ಲೋಕ ಬೆಳ್ತಂಗಡಿ : ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದ ಗಿರೀಶ್ ಮಟ್ಟಣ್ಣವರ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ಬೆಳ್ತಂಗಡಿ : ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದ ಗಿರೀಶ್ ಮಟ್ಟಣ್ಣವರ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

0

ಬೆಳ್ತಂಗಡಿ : ಸಾರ್ವಜನಿಕರಿಗೆ ಅಪರಾಧ ಮಾಡಲು ದುಪ್ರೇರಣೆಯಾಗುವ ರೀತಿಯಲ್ಲಿ ಅಶ್ಲೀಲವಾಗಿ ಸಾರ್ವಜನಿಕರಿಗೆ ಕಿರಿ ಕಿರಿಯುಂಟಾಗುವ ರೀತಿಯಲ್ಲಿ ಮಾತನಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಸಾರ ಮಾಡಿದ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವರ್ ವಿರುದ್ಧ ದೂರು ದಾಖಲಾದ ಬಗ್ಗೆ ವಿಚಾರಣೆಗೆ ನ್ಯಾಯಾಲಯಕ್ಕೆ ಸಿಸಿ.2815/2025 ರಲ್ಲಿ ಹಾಜರಾಗದ ಗಿರೀಶ್ ಮಟ್ಟಣ್ಣವರ್ ವಿರುದ್ಧ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಅ.27 ರಂದು ಜಾಮೀನು ರಹಿತ ವಾರಂಟ್ (NBW) ಜಾರಿ ಮಾಡಿದೆ.

ಪ್ರಕರಣದ ಸಾರಾಂಶ: ದೂರುದಾರ ಚರಣ್ ಶೆಟ್ಟಿ ಎಂಬವರು ದಿನಾಂಕ 06-08-2025 ರಂದು ಸಮಯ 9 ಗಂಟೆಗೆ ತಮ್ಮ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್ಟುಕ್ನಲ್ಲಿ ಸಂದೇಶಗಳನ್ನು ಪರಿಶೀಲಿಸುತ್ತಿರುವಾಗ https://www. facebook.com/share/v/ 1GzuhewhX5/ ನೇದರ ಲಿಂಕ್ನಲ್ಲಿ ಗಿರೀಶ್ ಮಟ್ಟಣ್ಣವರ್ ಸಾರ್ವಜನಿಕರಿಗೆ ಅಪರಾಧ ಮಾಡಲು ದುಪ್ರೇರಣೆಯಾಗುವ ರೀತಿಯಲ್ಲಿ ಅಶ್ಲೀಲವಾಗಿ ಸಾರ್ವಜನಿಕರಿಗೆ ಕಿರಿ ಕಿರಿಯುಂಟಾಗುವ ರೀತಿಯಲ್ಲಿ ಮಾತನಾಡಿ ಸದ್ರಿ ವೀಡಿಯೋವನ್ನು ಸಾಮಾಜಿಕ ಜಾಲತಾಣವಾದm ಪೇಸ್‌ಬುಕ್‌ನಲ್ಲಿ ಹರಿಯಬಿಟ್ಟಿರುವುದನ್ನು ನೋಡಿದ್ದು ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಬೆಳ್ತಂಗಡಿಯ ಚರಣ್ ಶೆಟ್ಟಿ ಎಂಬವರು 07-08-2025 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಮೇರಗೆ BNS-2023 (u/s-57,296,190) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

NO COMMENTS

LEAVE A REPLY

Please enter your comment!
Please enter your name here

Exit mobile version