Home ಸ್ಥಳೀಯ ಸಮಾಚಾರ ಲೋಕತಂತ್ರಬಚಾವೋ ಆಂದೋಲನ ಸಮಿತಿ ವತಿಯಿಂದ ನ 2 ರಂದು ತಿರಂಗಾ ನಡಿಗೆ

ಲೋಕತಂತ್ರಬಚಾವೋ ಆಂದೋಲನ ಸಮಿತಿ ವತಿಯಿಂದ ನ 2 ರಂದು ತಿರಂಗಾ ನಡಿಗೆ

3
0

ಬೆಳ್ತಂಗಡಿ;  ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜಿನಾಮೆಗೆ ಆಗ್ರಹಿಸಿ ನವೆಂಬರ್ 2 ರಂದು ಬೆಳ್ತಂಗಡಿಯಲ್ಲಿ ಲೋಕತಂತ್ರ ಬಚಾವೋ ಆಂದೋಲನ ಸಮಿತಿ ವತಿಯಿಂದ ಬೃಹತ್ ತಿರಂಗಾ ನಡಿಗೆ ಮತ್ತು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ತಾಲೂಕು ಸಂಚಾಲಕ ಶೇಖರ‌ ಲಾಯಿಲ ತಿಳಿಸಿದ್ದಾರೆ.

ಸಂವಿಧಾನ ವಿರೋಧಿ ಎಸ್ಐಆರ್ ನಿಂದಾಗಿ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಹಕ್ಕುಗಳು ಅಪಾಯದಲ್ಲಿದ್ದು , ಅರ್ಹ ಮತದಾರರನ್ನು ಎಸ್ಐಆರ್ ಮೂಲಕ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಆ ಮೂಲಕ ದೇಶದಲ್ಲಿ ಶಾಶ್ವತವಾಗಿ ನೆಲೆ ನಿಲ್ಲಲು ಬಿಜೆಪಿ ಚುನಾವಣಾ ಆಯೋಗವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಹೆಸರಿನಲ್ಲಿ ಮುಸ್ಲಿಂ , ಕ್ರೈಸ್ತ , ಆದಿವಾಸಿ, ದಲಿತ ಸಮುದಾಯದ ಮತದಾನದ ಹಕ್ಕನ್ನು ಮೊಟಕುಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್ಐಆರ್ ವಿರುದ್ಧ ದೇಶದಾದ್ಯಂತ ನಡೆಯುತ್ತಿರುವ ಹೋರಾಟದ ಭಾಗವಾಗಿ ಬೆಳ್ತಂಗಡಿಯಲ್ಲಿ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಸಂಜೆ 4 ಘಂಟೆಗೆ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದಿಂದ ಬೆಳ್ತಂಗಡಿ ಬಸ್ ನಿಲ್ದಾಣದ ವರೆಗೆ ತಿರಂಗಾ ನಡಿಗೆ ಕಾರ್ಯಕ್ರಮವನ್ನು ನಡೆಯಲಿದ್ದು , ನಂತರ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಯಲ್ಲಿ ತಾಲೂಕಿನ ಸಮಾನ ಮನಸ್ಕ ಪಕ್ಷಗಳು ಹಾಗೂ ಸಂಘಟನೆಗಳು ಭಾಗವಹಿಸಲಿದ್ದು , ಸಾವಿರಾರು ಜನರು ಭಾಗವಹಿಸಲಿದ್ದಾರೆ.
ಶಿವಸುಂದರ್ ಭಾಗಿ: ನಾಡಿನ ಖ್ಯಾತ ಪ್ರಗತಿಪರ ಚಿಂತಕ , ಅಂಕಣಕಾರ ಮತ್ತು ಹೋರಾಟಗಾರ ಶಿವಸುಂದರ್ ರವರು ಬೆಳ್ತಂಗಡಿಯಲ್ಲಿ ನಡೆಯುವ ಬೃಹತ್ ತಿರಂಗಾ ನಡಿಗೆ ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಮಿತಿ ಸಂಚಾಲಕ ಶೇಖರ್ ಲಾಯಿಲ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here