Home ಕ್ರೀಡಾ ಸಮಾಚಾರ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಮುಂಡಾಜೆ ಶಾಲೆಯ ಮೂವರು ಆಯ್ಕೆ

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಮುಂಡಾಜೆ ಶಾಲೆಯ ಮೂವರು ಆಯ್ಕೆ

7
0

ಬೆಳ್ತಂಗಡಿ: ಕಾರವಾರದ ಕುಮಟಾದಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 17 ವರ್ಷ ವಯೋಮಾನದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗದಿಂದ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಪ್ರೌಢಶಾಲೆಯ ಮೂವರು ವಿದ್ಯಾರ್ಥಿನಿಯರು ಬೆಳ್ಳಿ ಪದಕ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮುಂಡಾಜೆ ಪ್ರೌಢಶಾಲೆಯ ಯಶ್ಮಿತಾ, ಕೀರ್ತಿಕಾ ಹಾಗೂ ಚೈತನ್ಯ ಅವರು ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದು, ಡಿಸೆಂಬರ್‌ ನಲ್ಲಿ ರಾಜಸ್ಥಾನದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.

ವಿದ್ಯಾರ್ಥಿನಿಯರಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಗುಣಪಾಲ್ ಎಂ.ಎಸ್. ಅವರು ತರಬೇತಿ ನೀಡಿದ್ದು, ಸಂದೀಪ್ ಶೆಟ್ಟಿ ಹಾಗೂ ಬಾಲಕೃಷ್ಣ ಸಹಕರಿಸಿದ್ದಾರೆ.

LEAVE A REPLY

Please enter your comment!
Please enter your name here