Home ಅಪರಾಧ ಲೋಕ ಪುತ್ತೂರು ಬಾಲಕಿಯ ಮೇಲೆ ಅತ್ಯಾಚಾರ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಪುತ್ತೂರು ಬಾಲಕಿಯ ಮೇಲೆ ಅತ್ಯಾಚಾರ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

1
0

ಪುತ್ತೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯನ್ನು
ಅಪಹರಿಸಿ ಅತ್ಯಾಚಾರ ಎಸಗಿ ಬೆದರಿಕೆಯೊಡ್ಡಿದ್ದ ಪ್ರಕರಣದ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪುತ್ತೂರು) ತೀರ್ಪು ನೀಡಿದೆ. ನೆಲ್ಯಾಡಿ ನಿವಾಸಿ ರವಿ @ ರವೀಂದ್ರ ಆಚಾರ್ಯ (32) ಶಿಕ್ಷೆಗೆ ಗುರಿಯಾದ ಅಪರಾಧಿ.

2018ರಲ್ಲಿ ನಡೆದಿದ್ದ ಈ ಕೃತ್ಯದ ಕುರಿತು ಅಂದಿನ ಉಪ್ಪಿನಂಗಡಿ ವೃತ್ತ ನಿರೀಕ್ಷಕ ಡಿ. ಮಂಜುನಾಥ್ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸುಮಂಗಲ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಕೆಳಗಿನಂತೆ ಶಿಕ್ಷೆ ಪ್ರಕಟಿಸಿದ್ದಾರೆ:

ಪೋಕೋ ಕಾಯ್ದೆಯಡಿ: 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ

₹25,000 ದಂಡ (ದಂಡ ತೆರಲು ತಪ್ಪಿದರೆ ಹೆಚ್ಚುವರಿ 1 ವರ್ಷ ಶಿಕ್ಷೆ).

ಐಪಿಸಿ ಸೆಕ್ಷನ್ 506 (ಬೆದರಿಕೆ): 1 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ

*25,000 ದಂಡ (ದಂಡ ತೆರಲು ತಪ್ಪಿದರೆ ಹೆಚ್ಚುವರಿ 1 ವರ್ಷ ಶಿಕ್ಷೆ).

ಎರಡೂ ಶಿಕ್ಷೆಗಳು ಏಕಕಾಲದಲ್ಲಿ ಅನುಭವಿಸತಕ್ಕದ್ದು ಎಂದು ನ್ಯಾಯಾಲಯ ಆದೇಶಿಸಿದೆ. ಸರ್ಕಾರದ ಪರವಾಗಿ ಅಭಿಯೋಜಕ ಪುಷ್ಪರಾಜ್ ಅಡಂತಾಯ ವಾದ ಮಂಡಿಸಿದ್ದರು.

LEAVE A REPLY

Please enter your comment!
Please enter your name here