

ಬೆಳ್ತಂಗಡಿ.ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ರಾಜ್ಯದ ಹೈನುಗಾರರ ಸಂಕಷ್ಟಕ್ಕೆ ನೆರವಾಗುವ ನಿಟ್ಟಿನಲ್ಲಿ ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ಇದರಿಂದಾಗಿ ಹೈನುಗಾರರ ಕಣ್ಣೀರು ಒರೆಸುವ ಮಹತ್ವದ ಪಾತ್ರ ವಹಿಸಿದೆ. ಪಶು ಆಹಾರ ಬೆಲೆ ಹಾಗೂ ಪಶು ನಿರ್ವಹಣಾ ವೆಚ್ಚಗಳು ನಿರಂತರವಾಗಿ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಇಡೀ ಹೈನುಗಾರಿಕಾ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದೆ. ಹೈನುಗಾರರ ಆರ್ಥಿಕ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಜೊತೆಗೆ ಗ್ರಾಮೀಣ ಆರ್ಥಿಕತೆಯನ್ನು ಗಟ್ಟಿಗೊಳಿಸಲು ಹೈನುಗಾರರಿಗೆ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿ 7 ರೂಪಾಯಿ ಘೋಷಣೆ ಮಾಡಲಾಗಿದೆ. ಇದು ರೈತಪರ ಸರ್ಕಾರದ ಕಾಳಜಿಗೆ ಸಾಕ್ಷಿಯಾಗಿದೆ. ರಾಜ್ಯದ ಹೈನುಗಾರರ ಹಿತ ಕಾಪಾಡಲು ಐತಿಹಾಸಿಕ ತೀರ್ಮಾನ ಕೈಗೊಂಡಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಹೈನುಗಾರರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಎಂದು ಕೆಪಿಸಿಸಿ ಕರ್ನಾಟಕ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.




