Home ರಾಜಕೀಯ ಸಮಾಚಾರ ಬೆಳ್ತಂಗಡಿ: ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಗೇಶ್ ಕುಮಾರ್ ಗೌಡ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಗೇಶ್ ಕುಮಾರ್ ಗೌಡ ನಾಮಪತ್ರ ಸಲ್ಲಿಕೆ

0
2

ಬೆಳ್ತಂಗಡಿ : ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಕೆ.ಎಂ ನಾಗೇಶ್ ಕುಮಾರ್ ಗೌಡ ಅವರು ಮತ್ತೊಮ್ಮೆ ಆಯ್ಕೆ ಬಯಸಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ.
ನಾಗೇಶ್ ಗೌಡ ಅವರು ಕಳೆದ ಅವಧಿಯಲ್ಲಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದು ಗ್ರಾಮೀಣ ಪ್ರದೇಶಗಳಲ್ಲಿ ಓಡಾಟ ನಡೆಸಿ ಪಕ್ಷದ ಸಂಘಟನೆಯಲ್ಲಿ ಮಹತ್ವದ ಕಾರ್ಯಗಳನ್ನು ಮಾಡಿದ್ದರು. ಪಕ್ಷದ ಸಂಘಟನೆಯಲ್ಲಿ ಹಾಗೂ ಸಮಾಜದಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಜನಪ್ರಿಯ ನಾಯಕರಾಗಿ ಬೆಳೆದ ಇವರು ಕಾಂಗ್ರೆಸ್ ಕಾರ್ಯಕರ್ತನಾಗಿ ಕೆಲಸ ಮಾಡಿ ನೇರವಾಗಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದರು.

ಪ್ರಸ್ತುತ ಇವರು ನವ ಜ್ಞಾನಸುಧಾ ಪಿಯು ಕಾಲೇಜಿನ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದು, ಇದೀಗ ಇವರು ಅಧ್ಯಕ್ಷ ಸ್ಥಾನಕ್ಕೆ ಮರು ಆಯ್ಕೆ ಬಯಸಿದ್ದು ಗ್ರಾಮೀಣ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖ ನಾಯಕರು ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here