
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಶ್ರೀಮುಡಿ ಭವನದ ಬಳಿಯ ವರಾಂಡದಲ್ಲಿ ಸುಮಾರು 50ರಿಂದ 55 ವರ್ಷ ಪ್ರಾಯದ ಅಪರಿಚಿತ ಗಂಡಸೊಬ್ಬರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ದಿನಾಂಕ 30-10-2026ರಂದು ಬೆಳಿಗ್ಗೆ ಸುಮಾರು 8:00 ಗಂಟೆಗೆ ಯಾವುದೋ ಅನಾರೋಗ್ಯ ಅಥವಾ ಇತರ ಕಾರಣದಿಂದ ಮಲಗಿದ್ದಲ್ಲಿಯೇ ಇವರು ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮೃತರ ವಾರಸುದಾರರು ಅಥವಾ ಸಂಬಂಧಿಕರು ಪತ್ತೆಯಾದಲ್ಲಿ ಕೂಡಲೇ ಧರ್ಮಸ್ಥಳ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಅಧಿಕಾರಿಗಳು ಕೋರಿದ್ದಾರೆ