Home ಸ್ಥಳೀಯ ಸಮಾಚಾರ ನ 2 ಸೋಮವಾರ (ಇಂದು) ಶಿಶಿಲ ಬೈರಾಪುರ ರಸ್ತೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ನ 2 ಸೋಮವಾರ (ಇಂದು) ಶಿಶಿಲ ಬೈರಾಪುರ ರಸ್ತೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

0

ಬೆಳ್ತಂಗಡಿ: ಬಹಳಷ್ಟು ವರ್ಷಗಳ ಬೇಡಿಕೆಯಾದ ಶಿಶಿಲ-ಬೈರಾಪುರ ರಸ್ತೆ ಅಭಿವೃದ್ಧಿ ಹಕ್ಕೋತ್ತಾಯ ಸಮಿತಿ ಶಿಶಿಲ ಇದರ ವತಿಯಿಂದ ನ.2ರಂದು ಸೋಮವಾರ ಅರಸಿನಮಕ್ಕಿಯಲ್ಲಿ ಶಿಶಿಲ-ಬೈರಪುರ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಬೃಹತ್ ಹಕ್ಕೋತ್ತಾಯ ಸಮಾವೇಶ ಹಮ್ಮಿಕೊಳ್ಳಲಾಗಿದೆ, ಸಚಿವರು, ಸಂಸದರು, ಶಾಸಕರು ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್, ಸಂಸದ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಹರೀಶ್ ಪೂಂಜ, ಕೆಪಿಸಿಸಿ ಜಿಲ್ಲಾ ಅಧ್ಯಕ್ಷ ಪದ್ಮರಾಜ್ ಆರ್.ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಜೆಡಿಎಸ್‌ ರಾಜ್ಯ ಕಾರ್ಯದರ್ಶಿ ಚಂದ್ರಣ್ಣನಿಡ್ವಾಳೆ ಮೂಡಿಗೆರೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್, ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ ಭಟ್, ಕೆಪಿಸಿಸಿ ಜಿಲ್ಲಾ ಕಾರ್ಯದರ್ಶಿ ಎ.ಸಿ ಮ್ಯಾಥ್ಯು ಭಾಗವಹಿಸಿ ಮಾತನಾಡಲಿದ್ದಾರೆ. ವಿವಿಧ ಕ್ಷೇತ್ರದ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಸುಮಾರು 45ಕ್ಕೂ ಮಿಕ್ಕಿ ಸಂಘ-ಸಂಸ್ಥೆಗಳು ಕಾರ್ಯಕ್ರಮವನ್ನು ಬೆಂಬಲಿಸಿದ್ದಾರೆ ಅರಸಿನಮಕ್ಕಿ ಪರಿಸರದ ಏಳು ಗ್ರಾಮಗಳ ಗ್ರಾಮಸ್ಥರು ಅರಸಿನಮಕ್ಕಿ ಆಟದ ಮೈದಾನದಲ್ಲಿ ಸೇರಿ ಅಲ್ಲಿಂದ ವಾಹನ ಜಾಥಾದ ಮೂಲಕ ಸಮಾವೇಶದ ಸ್ಥಳಕ್ಕೆ ಬರಲಿದ್ದಾರೆ. ಸುಮಾರು 3 ಸಾವಿರಕ್ಕೂ ಮಿಕ್ಕಿ ನಾಗರಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version