Home ಸ್ಥಳೀಯ ಸಮಾಚಾರ ಬೆಳ್ತಂಗಡಿ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ‌ ಅಧ್ಯಕ್ಷ ರಕ್ಷಿತ್ ಶಿವರಾಂ ಪದಗ್ರಹಣ

ಬೆಳ್ತಂಗಡಿ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ‌ ಅಧ್ಯಕ್ಷ ರಕ್ಷಿತ್ ಶಿವರಾಂ ಪದಗ್ರಹಣ

5
0

ಬೆಳ್ತಂಗಡಿ: ದೇಶದ ಹಿತಕ್ಕಾಗಿ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸರಕಾರಗಳು ವಿವಿಧ ಕಾನೂನನ್ನು, ಯೋಜನೆಗಳನ್ನು ಜಾರಿಗೆತಂದು ಜನರು ನೆಮ್ಮದಿಯ ಬದುಕನ್ನು ನಡೆಸಲು ಅವಕಾಶ ಒದಗಿಸಿದೆ. ಅದರ ಮುಂದುವರಿದ ಭಾಗವಾಗಿ ಇದೀಗ ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ಇಂದು ರಾಜ್ಯದ ಸಾಮಾನ್ಯ ಸ್ವಾಭಿಮಾನದ ಬದುಕು ನಡೆಸಲು ಸಾಧ್ಯವಾಗಿದೆ.
ಎಂದು ರಾಜ್ಯ ಸರಕಾರದ ಆರೋಗ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಯು.ಟಿ ಖಾದರ್ ಹೇಳಿದರು.
ಅವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ ವತಿಯಿಂದ
ಬೆಳ್ತಂಗಡಿ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಕ್ಷಿತ್ ಶಿವರಾಂ ಹಾಗೂ ಸಮಿತಿಯ ನೂತನ ಸದಸ್ಯರ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸ ಮಾತನಾಡಿದರು.
ಜನಪರ ಕಾಳಜಿಯಿರುವ ರಕ್ಷಿತ್ ಶಿವರಾಂ ಅವರು ಇದೀಗ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಅವರು ಬೆಳ್ತಂಗಡಿಗೆ ಬೇಕಾಗಿ ಹಲವಷ್ಟು ಕಾರ್ಯಗಳನ್ನು ಮಾಡಲು ಉತ್ಸುಕರಾಗಿದ್ದಾರೆ ಮುಂದಿನ ಬಾರಿಯಾದರೂ ರಕ್ಷಿತ್ ಶಿವರಾಂ ಅವರು ಬೆಳ್ತಂಗಡಿಯ ಶಾಸಕರಾಗಿ ಆಯ್ಕೆಯಾಗಬೇಕಾಗಿದೆ ಎಂದರು. ಬೆಳ್ತಂಗಡಿಯ ಅಭಿವೃದ್ದಿಗೆ ಇದು ಅಗತ್ಯವಾಗಿದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಅದಿಕಾರ ಬಂದ ನಂತರ ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿದಂತೆ ಐದು ಗ್ಯಾರಂಟಿ ಜಾರಿಗೊಳಿಸಿದ್ದು ಇದು ಕಟ್ಟ ಕಡೆಯ ಕುಟುಂಬದ ನೆಮ್ಮದಿಯ ಬದುಕಿಗಾಗಿ ಅನುಷ್ಠಾನ ಮಾಡಿದ್ದು ಇದರಿಂದ ಲಕ್ಷಾಂತರ ಕುಟುಂಬದ ಮೊಗದಲ್ಲಿ ನಗು ಬಂದಿದೆ. ಮುಂದಿ ಇನ್ನಷ್ಟು ಸಮರ್ಪಕವಾಗಿ ಅರ್ಹ ಕುಟುಂಬಗಳಿಗೆ ತಲುಪಲು ಹೊಸ ಸಮಿತಿ ರಚಿಸಲಾಗಿದೆ . ಹಿಂದಿನ ಸಮಿತಿ ಅತ್ಯಂತ ವ್ಯವಸ್ಥಿತವಾಗಿ ಮಾಡಿದ ಫಲ ಯೋಜನೆ ಯಶಸ್ವಿಯಾಗಿದೆ ಎಂದು ಉಸ್ತುವಾರಿ ಸಚಿವ ಯುಟಿ ಖಾದರ್ ಹೇಳಿದರು.


ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ ಗ್ಯಾರಂಟಿ ಯೋಜನೆಯನ್ನು ವಿರೋಧಿಸಿದ ಬಿಜೆಪಿ ಇಂದು ಬೇರೆ ರಾಜ್ಯಗಳಲ್ಲಿ ನಕಲು ಮಾಡಲು ಹೊರಟಿದೆ ಎಂದರು. ಗ್ಯಾರಂಟಿ ಯೋಜನೆಯ ನೂತನ ಅದ್ಯಕ್ಷ ರಕ್ಷಿತ್ ಶಿವರಾಂ ಮಾತನಾಡಿ ತಾಲೂಕಲ್ಲಿ ರಾಜ್ಯದಲ್ಲೇ ಮಾದರಿಯಾಗಿ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ ಎಂದರು. ಕಾರ್ಯಕ್ರಮದಲ್ಲಿ ಬಿ.ಎಂ.ಟಿ.ಸಿ ಉಪಾಧ್ಯಕ್ಷ ನಿಕೇತ್ ರಾಜ್, ಕನಾ೯ಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಸದಸ್ಯ ಟಿ.ಎಂ.ಶಾಹಿದ್ ತೆಕ್ಕಿಲ್ , ಕನಾ೯ಟಕ‌ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ದ.ಕ ಜಿಲ್ಲಾ ಗ್ಯಾರೆಂಟಿ ಯೋಜನೆ ಗಳ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ದ.ಕ ಜಿಲ್ಲಾ ಗ್ಯಾರೆಂಟಿ ಯೋಜನೆ ಗಳ ಪ್ರಾಧಿಕಾರದ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ, ಬೆಳ್ತಂಗಡಿ ತಾಲೂಕು ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಪದ್ಮನಾಭ ಸಾಲ್ಯಾನ್, ಸಿಡಿಪಿಒ ಪ್ರಿಯಾ ಆಗ್ನೇಸ್, ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ನಿರ್ದೇಶಕ ಕ್ಲೆಮೆಂಟ್ ಬ್ರಾಕ್ಸ್, ಆಹಾರ ಶಿರಸ್ತೆದಾರ ಸಂತೋಷ್, ಆಹಾರ ನಿರೀಕ್ಷಕ ವಿಶ್ವ, ಜಿ.ಪಂ.ಮಾಜಿ ಸದಸ್ಯ ಶಾಹುಲ್ ಹಮೀದ್, ಪಂಚ ಗ್ಯಾರಂಟಿ ಯೋಜನೆ ಗಳ ಅನುಷ್ಠಾನ ಸಮಿತಿ ಸದಸ್ಯರಾದ ಅಬ್ದುಲ್ ರಹಿಮಾನ್,‌ಮಹಮ್ಮದ್ ಆರೀಸ್, ಸುಕೇಶ್ ಕೆ., ವಿನೋದ್ ಡಿ ಸೋಜ, ಯಂ.ಸೂಯ೯ಪ್ರಕಾಶ, ಮೋಹನ್ ಕುಮಾರ್ ಬಿ.ಎ, ಜೋಸೆಫ್ ಕೆ.ಜೆ, ಸುಪ್ರಿಯಾ ಡಿ ಸೋಜ, ಸುಧೀರ್ ಕುಮಾರ್, ವಿನಯ್ ಕುಮಾರ್, ಮುನಿರಾಜ ಜೈನ್, ಪುಷ್ಪಾಲತಾ, ರವಿ, ಸಚಿನ್ ದೇವಾಡಿಗ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್‌ ನಗರ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ನ,
ಬ್ಲಾಕ್ ಕಾಂಗ್ರೆಸ್‌ ಗ್ರಾಮೀಣ ಅಧ್ಯಕ್ಷ
ನಾಗೇಶ್ ಕುಮಾರ್ ಗೌಡ ಹಾಗೂ ಎಲ್ಲಾ ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸರ್ಕಾರದ ನಾಮನಿರ್ದೇಶಿತ ಸದಸ್ಯರು, ಗ್ರಾಮ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಬೂತ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಬಿಎಲ್ ಎ-2 ಸದಸ್ಯರು, ಪಕ್ಷದ ಹಿರಿಯ ಮುಖಂಡರು, ಯುವ ನಾಯಕರು, ಕಾರ್ಯಕರ್ತರು ಹಾಗೂ ಪಕ್ಷದ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು . ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರನ್ನು, ಉತ್ತಮ ಶಿಕ್ಷಕರನ್ನು, ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಅದಿಕಾರಿಗಳನ್ನು , ಸಚಿವರನ್ನು ಗೌರವಿಸಲಾಯಿತು.
ತಾ.ಪಂ ಕಾಯ೯ನಿವಾ೯ಹಣಾಧಿಕಾರಿ ಹಾಗೂ ಪಂಚ ಗ್ಯಾರೆಂಟಿ ಅನುಷ್ಠಾನ ಸಮಿತಿ ಸದಸ್ಯ ಕಾರ್ಯದರ್ಶಿ ಭವಾನಿ ಶಂಕರ್ ಸ್ವಾಗತಿಸಿದರು. ಶಿಕ್ಷಕ ಅಜಿತ್ ಕುಮಾರ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here