Home ಶಾಲಾ ಕಾಲೇಜು ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ವಾರ್ಷಿಕೋತ್ಸವ; ವಿದ್ಯಾರ್ಥಿಗಳು ವಿದ್ಯೆಯ ಜೊತೆ ಉತ್ತಮ ಬದುಕು ರೂಪಿಸಿಕೊಳ್ಳಲು ಕರೆ

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ವಾರ್ಷಿಕೋತ್ಸವ; ವಿದ್ಯಾರ್ಥಿಗಳು ವಿದ್ಯೆಯ ಜೊತೆ ಉತ್ತಮ ಬದುಕು ರೂಪಿಸಿಕೊಳ್ಳಲು ಕರೆ

0

ಬೆಳ್ತಂಗಡಿ : ‘ ವಿದ್ಯೆ ಲೋಕವನ್ನು ಗೆಲ್ಲುವ ಅಸ್ತ್ರವಾಗಿದೆ. ಶಾಲಾ ಕಾಲೇಜಿನ ಅವಧಿಯಲ್ಲಿ ಸಿಗುವಂತಹ ಅವಕಾಶಗಳನ್ನು ತನ್ನದಾಗಿಸಿಕೊಳ್ಳುವುದೇ ಪ್ರತಿಭಾನ್ವಿತರ ಲಕ್ಷಣವಾಗಿದೆ. ಹಾಗಾಗಿ ವಿದ್ಯಾರ್ಥಿಗಳು ವಿದ್ಯೆ ಸಂಪಾದನೆಯ ಜೊತೆಗೆ ಉತ್ತಮ ಬದುಕು ರೂಪಿಸಿಕೊಳ್ಳುವ ಕಡೆಗೂ ಸದಾ ಚಿಂತನಶೀಲರಾಗಿರಬೇಕು’ ಎಂದು ಬೆಳ್ತಂಗಡಿ ವನ್ಯ ಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಶರ್ಮಿಷ್ಠ ಹೇಳಿದರು.

ಅವರು ಗುರುವಾರ ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು

ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ ಅಜಿಲ ಮಾತನಾಡಿ, ‘ ಬಡ ಮಧ್ಯಮ ವರ್ಗದ ಪಾಲಿಗೆ ಭರವಸೆಯ ಬೆಳಕಾಗಿ ಗುರುದೇವ ಕಾಲೇಜು ಬೆಳೆಯುತ್ತಿದೆ. ವಿದ್ಯಾರ್ಥಿಗಳು ವಿದ್ಯಾರ್ಜನೆಯ ಬಳಿಕ ತಾನು ಕಲಿತ ಶಿಕ್ಷಣ ಸಂಸ್ಥೆಯ ಜೊತೆ ಅವಿನಾಭಾವ ಸಂಬಂಧ ಬೆಳೆಸಿಕೊಂಡಿರಬೇಕು’ ಎಂದರು.

ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷೆ ಪ್ರೀತಿತ ಧರ್ಮವಿಜೇತ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದ ಸಾಧಕರನ್ನು ಬಹುಮಾನ ನೀಡಿ ಗೌರವಿಸಲಾಯಿತು. ಜಿಲ್ಲಾ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರನ್ನು, ನೃತ್ಯ ಸಂಯೋಜನೆ ನೀಡಿದ ಮೋಹಿತ್ ಕುಲಾಲ್ ಇವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆಶಿಕ್, ಕಾರ್ಯದರ್ಶಿ ಆಯಿಷಾ, ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ರಕ್ಷಿತಾ, ಕಾರ್ಯದರ್ಶಿ ಕೃಷ್ಣ ಇದ್ದರು.

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ ಸವಿತಾ ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಬಿ. ಎ. ಶಮೀವುಲ್ಲಾ ವರದಿ ವಾಚಿಸಿದರು. ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕಿ ಸೌಜನ್ಯ ಪರಿಚಯಿಸಿದರು. ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ಶುಭ ಲಕ್ಷ್ಮೀ ಸಂದೇಶ ವಾಚಿಸಿದರು. ಇತಿಹಾಸ ವಿಭಾಗದ ಉಪನ್ಯಾಸಕಿ ಅಂಬಿಕಾ, ವಾಣಿಜ್ಯ ವಿಭಾಗದ ಉಪನ್ಯಾಸಕಿ ಸುಷ್ಮಾ, ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ಬಬಿತಾ, ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿ ಅನನ್ಯ, ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ಚಂದನಾ, ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಅಕ್ಷತಾ ಬಹುಮಾನಿತರ ಪಟ್ಟಿಯನ್ನು ವಾಚಿಸಿದರು. ಕನ್ನಡ ವಿಭಾಗದ ಉಪನ್ಯಾಸಕ ಗಣೇಶ್ ಶಿರ್ಲಾಲು ಮತ್ತು ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ವಂದಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version