

ಮಂಗಳೂರು; ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯಾಗಿದ್ದ ಸಂತೋಷ್ ರಾವ್ ಬಿಡುಗಡೆಗೆ ಮಹೇಶ್ ಶೆಟ್ಟಿ ತಿಮರೋಡಿ, ವಿಠಲಗೌಡ ಹಲವು ರೀತಿಯ ಕಸರತ್ತು ನಡೆಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಹೈಕೋರ್ಟ್ ವಕೀಲ ಅಮೃತೇಶ್ ಎಸ್‌ಐಟಿಗೆ ಮನವಿ ಮಾಡಿದ್ದಾರೆ.
ಈ ಪ್ರಕರಣದಲ್ಲಿ ಭ್ರಷ್ಟ ವಿಧಾನಗಳನ್ನು ಅನುಸರಿಸಿ ಆರೋಪಿಯ ಖುಲಾಸೆ ಪ್ರಯತ್ನ ಮಾಡಲಾಗಿದೆ. ಹೀಗಾಗಿ ಎಲ್ಲಾ ರೀತಿಯ ಆರೋಪಗಳ ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಸುವ ಅಗತ್ಯವಿದೆ. ವಿಠಲ ಗೌಡ ಮತ್ತು ಮಹೇಶ್ ಶೆಟ್ಟಿ ತಿಮರೋಡಿಯ ಹೇಳಿಕೆಗಳನ್ನು ಅಧಿಕೃತವಾಗಿ ದಾಖಲಿಸಬೇಕು. ಸಂತೋಷ್ ರಾವ್ ಬಿಡುಗಡೆಗೆ ಅನುಕೂಲ ಮಾಡಿಕೊಡುವಲ್ಲಿ ಇವರ ಆಸಕ್ತಿಗೆ ಕಾರಣವೇನು ಎಂಬುದನ್ನು ಪತ್ತೆಹಚ್ಚಬೇಕು ಎಂದು ಅಮೃತೇಶ್ ಎಸ್‌ಐಟಿಗೆ ಸಲ್ಲಿಸಿರುವ ದೂರಿನಲ್ಲಿ ಒತ್ತಾಯಿಸಿದ್ದಾರೆ.
ಎಸ್.ಐ.ಟಿ ಗೆ ಈ ದೂರು ನೀಡಲಾಗಿದ್ದರೂ ಇದರ ಬಗ್ಗೆ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬ ಕುತೂಹಲ ಸಾರ್ವಜನಿಕರಲ್ಲಿದೆ. ಸೌಜನ್ಯ ಅತ್ಯಾಚಾರ ಕೊಲೆ ಪ್ರಕರರಣದ ಬಗ್ಗೆ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶದಂತೆ ಎಸ್.ಐ.ಟಿ ರಚನೆಯಾಗಿದ್ದು ತಂಡಕೊಲೆ ಪ್ರಕರಣದ ಬಗ್ಗೆ ತನಿಖೆ ನಡೆಸುವುದಕ್ಕೇ ಸಮಯಾವಕಾಶ ಇಲ್ಲದಾಗ ಇಂತಹ ದೂರುಗಳ ಬಗ್ಗೆ ಯಾವ ಕ್ರಮಕ್ಕೆ ಮುಂದಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.










