Home ಅಪರಾಧ ಲೋಕ ಬೆಳ್ತಂಗಡಿ;  2.41 ಲಕ್ಷ ಮೌಲ್ಯದ ವಿದ್ಯುತ್ ಸಾಮಗ್ರಿಗಳ ಕಳವು – ಮೂವರು ಅಪರಿಚಿತರ ವಿರುದ್ಧ ಪ್ರಕರಣ...

ಬೆಳ್ತಂಗಡಿ;  2.41 ಲಕ್ಷ ಮೌಲ್ಯದ ವಿದ್ಯುತ್ ಸಾಮಗ್ರಿಗಳ ಕಳವು – ಮೂವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲು

2
0

ಬೆಳ್ತಂಗಡಿ; ಉಜಿರೆ ಸಮೀಪ ನಿಡಿಗಲ್ ನಲ್ಲಿ ಪ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ಸಂಗ್ರಹಿಸಿಡಲಾಗಿದ್ದ ಸುಮಾರು ₹2,41,500 ಮೌಲ್ಯದ ವಿದ್ಯುತ್ ಸಾಮಗ್ರಿಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.
ಮೊಗ್ರೋಡಿ ಕಂಪೆನಿಯ ಕಲ್ಮಂಜ ನಿಡಿಗಲ್ ಯಾರ್ಡ್ ಇನ್‌ಚಾರ್ಜ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬೆಳಾಲು ಗ್ರಾಮದ ರಂಜನ್ (24) ಎಂಬವರು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಿಸಲಾಗಿದೆ.

ನಿಡಿಗಲ್ ಪ್ರದೇಶದಲ್ಲಿ ಕಂಪೆನಿಯ ಯಾರ್ಡ್‌ನಲ್ಲಿ 33 ಕೆವಿ ವಿದ್ಯುತ್ ಮಾರ್ಗ ಸ್ಥಳಾಂತರಿಸುವ ಸಂದರ್ಭದಲ್ಲಿ ಕಳಚಲಾಗಿದ್ದ ಕೊಯೋಟ್ ವಾಹಕ ಹಾಗೂ ಕಬ್ಬಿಣದ ಸಾಮಗ್ರಿಗಳನ್ನು ಸಂಗ್ರಹಿಸಿಡಲಾಗಿತ್ತು.
ನ.9ರಂದು ಸಾಮಗ್ರಿಗಳು ಸ್ಥಳದಲ್ಲಿದ್ದುದನ್ನು ಗಮನಿಸಿದ್ದು ನ.11ರಂದು ಬೆಳಿಗ್ಗೆ ಸುಮಾರು 8 ಗಂಟೆಗೆ ಕೆಲಸಕ್ಕೆ ಬಂದಾಗ ಯಾರ್ಡ್‌ನ ಕಂಟೈನರ್ ಸಮೀಪ ಸಂಗ್ರಹಿಸಿಟ್ಟಿದ್ದ ವಿದ್ಯುತ್ ಸಾಮಗ್ರಿಗಳು ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ.
ಬಳಿಕ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ನ.10ರ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಪಿಕಪ್ ವಾಹನದಲ್ಲಿ ಬಂದ ಮೂವರು ಅಪರಿಚಿತರು ಸಾಮಗ್ರಿಗಳನ್ನು ಕಳವು ಮಾಡಿಕೊಂಡು ಹೋಗಿರುವುದು ಕಂಡುಬಂದಿದೆ. ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 82/2026, ಕಲಂ 303(2) BNS-2023ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here