Home ಅಪರಾಧ ಲೋಕ ಮಂಗಳೂರಿನಲ್ಲಿ ಇಬ್ಬರು ಬಾಂಗ್ಲಾದೇಶದ ಅಕ್ರಮ ವಲಸಿಗರ ಪತ್ತೆ; ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ...

ಮಂಗಳೂರಿನಲ್ಲಿ ಇಬ್ಬರು ಬಾಂಗ್ಲಾದೇಶದ ಅಕ್ರಮ ವಲಸಿಗರ ಪತ್ತೆ; ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ವಶಕ್ಕೆ

0

ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.
ರೆಸ್ಟೋರೆಂಟ್‌ನಲ್ಲಿ ಬಾಂಗ್ಲಾದೇಶದ ಇಬ್ಬರು ಪ್ರಜೆಗಳು ಅಕ್ರಮವಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪಣಂಬೂರು ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಭಾರತದಲ್ಲಿ ನೆಲೆಸಿರುವುದು ಬೆಳಕಿಗೆ ಬಂದಿದೆ.
ಮುಂದಿನ ಕಾನೂನು ಪ್ರಕ್ರಿಯೆಯ ಅಂಗವಾಗಿ ಇಬ್ಬರನ್ನು ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿರಿಸಿ, ಬಳಿಕ ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಮುಂದೆ ಹಾಜರುಪಡಿಸಿ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವ ಪ್ರಕ್ರಿಯೆಗೆ ಪಣಂಬೂರು ಪೊಲೀಸರು ಚಾಲನೆ ನೀಡಿದ್ದಾರೆ.
ಈ ಕಾರ್ಯಾಚರಣೆಯನ್ನು ಪಣಂಬೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಲೀಂ ಅಬ್ಬಾಸ್ ಅವರ ನೇತೃತ್ವದಲ್ಲಿ ಪಿಎಸ್ಐಗಳಾದ ಶ್ರೀಮತಿ ಶ್ರೀಕಲಾ ಕೆ.ಟಿ., ಜ್ಞಾನಶೇಖರ್ ಹಾಗೂ ಸಿಬ್ಬಂದಿಗಳಾದ ಇಮ್ತಿಯಾಝ್, ಫಕ್ಕಿರೇಶ್ ಮತ್ತು ರಾಕೇಶ್ ಎಲ್.ಎಂ. ಅವರು ಕಾರ್ಯಾಚರಣೆ ನಡೆಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version