Home ಅಪರಾಧ ಲೋಕ ಬಂಟ್ವಾಳ;ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ ಆರೋಪಿಗಳಿಂದ ₹2.01 ಲಕ್ಷ ನಗದು ವಶ

ಬಂಟ್ವಾಳ;ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ ಆರೋಪಿಗಳಿಂದ ₹2.01 ಲಕ್ಷ ನಗದು ವಶ

0


ಮಂಗಳೂರು: ಬಂಟ್ವಾಳದ ಮಣಿನಾಲ್ಕೂರು ಮುಲ್ಕಾಜೆ ಮಾಡ ಎಂಬಲ್ಲಿ ಸಿಮೆಂಟ್ ಹಾಗೂ ಕಬ್ಬಿಣದ ಮಾರಾಟ ಸಂಸ್ಥೆಯ ಉದ್ಯೋಗಿಗೆ ತಲವಾರು ತೋರಿಸಿ ಬೆದರಿಸಿ ₹8.35 ಲಕ್ಷ ನಗದು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಂಗಳೂರು ಶಕ್ತಿನಗರದ ಪ್ರವಿತ್ ಶೆಟ್ಟಿ, ಉಳ್ಳಾಲ ಕೋಡಿಯ ಉಮ್ಮರ್ ಫಾರೂಕ್ ಹಾಗೂ ಉಳ್ಳಾಲ ಹರೇಕಳದ ಶಾಕೀರ್ ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ.

ಮಂಗಳೂರಿನ ಕಣ್ಣೂರಿನ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಯ್ಯದಿ (40) ಅವರು ಸಂಸ್ಥೆಯ ವ್ಯವಹಾರದ ಹಣ ಸಂಗ್ರಹಿಸುವ ಸಲುವಾಗಿ 2026ರ ಆಗಸ್ಟ್ 20ರಂದು ಬೈಕ್‌ನಲ್ಲಿ ತೆರಳಿದ್ದರು. ವಿವಿಧ ಅಂಗಡಿಗಳಿಂದ ಹಣ ಸಂಗ್ರಹಿಸಿ ಬಂಟ್ವಾಳ ಕಕ್ಕೆಪದವಿನಿಂದ ಪಾಣೆಮಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಮಧ್ಯಾಹ್ನ ಸುಮಾರು 1 ಗಂಟೆಗೆ ಮಣಿನಾಲ್ಕೂರು ಮುಲ್ಕಾಜೆ ಮಾಡ ಎಂಬಲ್ಲಿ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ಅಪರಿಚಿತರು ತಲವಾರು ತೋರಿಸಿ ಬೆದರಿಸಿ ಅವರ ಬಳಿಯಿದ್ದ ₹8,35,000 ನಗದು ಹಣವನ್ನು ದರೋಡೆಗೈದು ಪರಾರಿಯಾಗಿದ್ದರು.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಪೊಲೀಸರು ಮಂಗಳೂರು ಶಕ್ತಿನಗರದ ಪ್ರವಿತ್ ಶೆಟ್ಟಿ, ಉಳ್ಳಾಲ ಕೋಡಿಯ ಉಮ್ಮರ್ ಫಾರೂಕ್ ಹಾಗೂ ಉಳ್ಳಾಲ ಹರೇಕಳದ ಶಾಕೀರ್ ಎಂಬವರನ್ನು ನವೆಂಬರ್ 11ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಪ್ರಕರಣದ ವಿಚಾರಣೆಗಾಗಿ ಆರೋಪಿಗಳನ್ನು ನವೆಂಬರ್ 16ರವರೆಗೆ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ ಪೊಲೀಸರು, ಆರೋಪಿಗಳಿಂದ ₹2,01,000 ನಗದನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿತ ಪ್ರವಿತ್ ರಾಜ್ ಶೆಟ್ಟಿಯ ಗುರುತು ಪತ್ತೆ ಪರೇಡ್ ಕೂಡ ನಡೆಸಲಾಗಿದ್ದು, ಪ್ರಕರಣದ ಮುಂದಿನ ತನಿಖೆ ಮುಂದುವರಿದಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version