Home ಸ್ಥಳೀಯ ಸಮಾಚಾರ ಶಿಶಿಲ–ಬೈರಾಪುರ ರಸ್ತೆ ಸಂಪರ್ಕಕ್ಕೆ ಶಾಸಕ ಹರೀಶ್ ಪೂಂಜ ಮುತುವರ್ಜಿ; ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ

ಶಿಶಿಲ–ಬೈರಾಪುರ ರಸ್ತೆ ಸಂಪರ್ಕಕ್ಕೆ ಶಾಸಕ ಹರೀಶ್ ಪೂಂಜ ಮುತುವರ್ಜಿ; ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ

3
0

ಮಂಗಳೂರು; ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ನಡುವಿನ ಸಂಪರ್ಕ ಕೊಂಡಿಯಾಗಿರುವ ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಯು ಈ ಭಾಗದ ಜನರ ಬಹುದಶಕಗಳ ಬೇಡಿಕೆಯಾಗಿದೆ.
ಈ ಹಿನ್ನೆಲೆಯಲ್ಲಿ ರಸ್ತೆ ಸಂಪರ್ಕದ ಬೇಡಿಕೆಯನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಶಾಸಕ ಹರೀಶ್ ಪೂಂಜ ಅವರು ವಿಶೇಷ ಮುತುವರ್ಜಿ ವಹಿಸಿ ಗುರುವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಸಭೆ ನಡೆಯಿತು.

ಸಭೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಪ್ರಸ್ತಾವಿತ ರಸ್ತೆ ಮಾರ್ಗದ ತಾಂತ್ರಿಕ ಸಾಧ್ಯತೆಗಳು, ಅರಣ್ಯ ಪ್ರದೇಶಕ್ಕೆ ಸಂಬಂಧಿಸಿದ ನಿಯಮಗಳು, ಅಗತ್ಯ ಅನುಮತಿಗಳು, ಭೂಮಿಯ ಸ್ವರೂಪ ಹಾಗೂ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದ ವಿವಿಧ ತಾಂತ್ರಿಕ ಅಂಶಗಳ ಕುರಿತು ಚರ್ಚಿಸಲಾಯಿತು.

ಅಲ್ಲದೆ, ಸಮಗ್ರ ಯೋಜನಾ ವರದಿ (DPR) ಸಿದ್ಧಪಡಿಸಲು ಕೈಗೊಳ್ಳಬೇಕಾದ ಸ್ಥಳ ಪರಿಶೀಲನೆ, ಅಗತ್ಯ ದಾಖಲೆಗಳ ಸಂಗ್ರಹ, ಇಲಾಖಾವಾರು ಜವಾಬ್ದಾರಿಗಳು ಹಾಗೂ ವರದಿ ಸಿದ್ಧಪಡಿಸುವ ಕಾಲಮಿತಿಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

ಶಿಶಿಲ–ಬೈರಾಪುರ ರಸ್ತೆ ಸಂಪರ್ಕದ ದಶಕಗಳ ಬೇಡಿಕೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಮಗ್ರ ಯೋಜನಾ ವರದಿ ಸಿದ್ಧಪಡಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಿ, ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸಂಬಂಧಪಟ್ಟ ಇಲಾಖೆಗಳ ಸಮನ್ವಯದೊಂದಿಗೆ ಮುಂದಿನ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಸೂಚಿಸಲಾಯಿತು.

LEAVE A REPLY

Please enter your comment!
Please enter your name here