Home ರಾಜಕೀಯ ಸಮಾಚಾರ ಬಿಜೆಪಿ ವತಿಯಿಂದ ಬಂದಾರಿನಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಜನಾಂದೋಲನ

ಬಿಜೆಪಿ ವತಿಯಿಂದ ಬಂದಾರಿನಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಜನಾಂದೋಲನ

0

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಜನಾಂದೋಲನ ಬೃಹತ್ ಪ್ರತಿಭಟನೆ ನವೆಂಬರ್ 20 ರಂದು ಬಂದಾರು ಮುಖ್ಯ ಪಟ್ಟಣದಲ್ಲಿ ಕಾಲ್ನಡಿಗೆ ಜಾಥಾ ಮೂಲಕ ಕಾರ್ಯಕ್ರಮ ಆರಂಭಗೊಂಡಿತು. ಪ್ರಾಸ್ತಾವಿಕ ಮಾತುಗಳನ್ನಾಡಿದ ಬಿಜೆಪಿ ಜಿಲ್ಲಾ ಸಹ ಪ್ರಭಾರಿಗಳಾದ ಜಯಂತ್ ಕೋಟ್ಯಾನ್ ಸರ್ಕಾರದ ಆಡಳಿತ ವಿರೋಧಿ ನೀತಿಗಳ ವಿರುದ್ಧ ಕಿಡಿಕಾರಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಮನ್ ಕೀ ಬಾತ್ ಸಂಚಾಲಕರಾದ ಸೀತಾರಾಮ್ ಬೆಳಾಲು ನೆರೆದ ಗ್ರಾಮಸ್ಥರನ್ನು ಉದ್ದೇಶಿಸಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ನೀತಿಗಳ ವಿರುದ್ಧ ಎಳೆ ಎಳೆಯಾಗಿ ವಿವರಿಸಿದರು. ವೇದಿಕೆಯಲ್ಲಿ ಬಂದಾರು ಪಂಚಾಯತ್ ಪ್ರಭಾರಿ ಯುವ ವಕೀಲರಾದ ಯತೀಶ್ ಶೆಟ್ಟಿ ಪಣೆಕ್ಕರ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಮಹಾಬಲ ಗೌಡ ನಾಗದೋoಡಿ ಪೆರ್ಲ-ಬೈಪಾಡಿ,ಕಣಿಯೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೇoಕ್ಯಾರ್, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಡಿ. ಕೆ ಕಡಮ್ಮಾಜೆ ಫಾರ್ಮ್ಸ್ , ಬಂದಾರು ಮತ್ತು ಮೊಗ್ರು ಶಕ್ತಿ ಕೇಂದ್ರ ಪ್ರಮುಖರಾದ ದಿನೇಶ್ ಗೌಡ ಖಂಡಿಗ, ಗಂಗಾಧರ ಪೂಜಾರಿ ದoಬೆತ್ತಿಮಾರು ಹಾಗೂ ಪಕ್ಷದ ಅನ್ಯನ್ಯ ಜವಾಬ್ದಾರಿಯ ಹಲವು ಪ್ರಮುಖರು,ಜನಪ್ರತಿನಿದಿನಗಳು ಕಾರ್ಯಕರ್ತರು, ನಾಗರಿಕರು ಉಪಸ್ಥಿತರಿದ್ದರು.ಪದ್ಮುಂಜ ಸಿ ಎ ಬ್ಯಾಂಕ್ ನಿರ್ದೇಶಕರು ಯುವ ವಕೀಲರಾದ ಉದಯ್ ಕುಮಾರ್ ಬಿ. ಕೆ ಕಾರ್ಯಕ್ರಮ ನಿರ್ವಹಣೆ ಮಾಡಿದರು.

NO COMMENTS

LEAVE A REPLY

Please enter your comment!
Please enter your name here

Exit mobile version