
ಬೆಳ್ತಂಗಡಿ: ಕಾಲುನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆ ನಿನ್ನಿಕಲ್ಲು ಸಮೀಪದ ಮಣಿಕೆ ಎಂಬಲ್ಲಿ ಶುಕ್ರವಾರ ನಡೆದಿದೆ.
ಚಾರ್ಮಾಡಿ ನಿವಾಸಿ ಸುಂದರ (55) ಮೃತಪಟ್ಟವರು. ಅವರು ಉಜಿರೆಯಲ್ಲಿರುವ ತಮ್ಮ ಮೂಲ ಮನೆಯ ಹಿಂಭಾಗದಲ್ಲಿರುವ ಕೊಟ್ಟಿಗೆಯ ಚಾವಣಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸುಂದರ ಅವರು ಕೂಲಿ ಕಾರ್ಮಿಕರಾಗಿದ್ದು, ಕಳೆದ ಹಲವು ಸಮಯಗಳಿಂದ ಕಾಲುನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಶುಕ್ರವಾರ ಅವರು ಉಜಿರೆಯ ಮಣಿಕೆಯಲ್ಲಿರುವ ತಮ್ಮ ಮೂಲ ಮನೆಗೆ ಬಂದಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಮೃತರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ