Home ಸ್ಥಳೀಯ ಸಮಾಚಾರ ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಜಾರಿಯಾಗದ ಹಿನ್ನೆಲೆ;ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಜಾರಿಯಾಗದ ಹಿನ್ನೆಲೆ;ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್

3
0

ಬೆಂಗಳೂರು: ಉಜಿರೆಯ ಸೌಜನ್ಯ ಪರ ಹೋರಾಡಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡುವಂತೆ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿರುವ ಆದೇಶವು ಇದುವರೆಗೂ ಜಾರಿಯಾಗದ ಹಿನ್ನೆಲೆಯಲ್ಲಿ, ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿರುವುದಾಗಿ ತಿಳಿದು ಬಂದಿದೆ.
ಧರ್ಮಸ್ಥಳದ ಧನಕೀರ್ತಿ ಅರಿಗ ಅವರು ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಏಕಸದಸ್ಯ ನ್ಯಾಯಪೀಠವು ಈ ಆದೇಶ ಹೊರಡಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರಾದ ವಿನಯ್ ಎನ್. ಅವರು ವಾದ ಮಂಡಿಸಿ, “ಪ್ರಕರಣದ 10ನೇ ಪ್ರತಿವಾದಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಈಗಾಗಲೇ ಗಡಿಪಾರು ಆದೇಶ ಹೊರಡಿಸಲಾಗಿದೆ. ಆದರೆ ಆ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ನಡುವೆಯೂ ಗಡಿಪಾರು ಆದೇಶ ಜಾರಿಯಾಗಿಲ್ಲ” ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಇದನ್ನು ಪರಿಗಣಿಸಿದ ನ್ಯಾಯಮೂರ್ತಿಗಳು, ಪ್ರಕರಣದ 1ರಿಂದ 9ನೇ ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ), ಎಡಿಜಿಪಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ), ಬಂಟ್ವಾಳ ಡಿವೈಎಸ್ಪಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪುತ್ತೂರು ಉಪ ವಿಭಾಗಾಧಿಕಾರಿ ಹಾಗೂ ಬೆಳ್ತಂಗಡಿ ಠಾಣಾಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದರು.
ನೋಟಿಸ್ ಉತ್ತರಿಸಲು ಡಿಸೆಂಬರ್ 16ರ ಗಡುವು ನೀಡಿದ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಡಿ.16ಕ್ಕೆ ನಿಗದಿಪಡಿಸಿತು.

LEAVE A REPLY

Please enter your comment!
Please enter your name here