Home ರಾಜಕೀಯ ಸಮಾಚಾರ ಉಪ್ಪಿನಂಗಡಿ–ಗುರುವಾಯನಕೆರೆ ಹೆದ್ದಾರಿ ಮರು ಡಾಮರೀಕರಣಕ್ಕೆ ಸಚಿವ ಸತೀಶ್ ಜಾರಕಿಹೊಳಿಗೆ ಎಸ್‌ಡಿಪಿಐ ನಿಯೋಗದಿಂದ ಮನವಿ

ಉಪ್ಪಿನಂಗಡಿ–ಗುರುವಾಯನಕೆರೆ ಹೆದ್ದಾರಿ ಮರು ಡಾಮರೀಕರಣಕ್ಕೆ ಸಚಿವ ಸತೀಶ್ ಜಾರಕಿಹೊಳಿಗೆ ಎಸ್‌ಡಿಪಿಐ ನಿಯೋಗದಿಂದ ಮನವಿ

0

ಬೆಳ್ತಂಗಡಿ: (ನ-27): ಕಳೆದ ನಾಲ್ಕು ವರ್ಷಗಳಿಂದ ತೀವ್ರ ಹದಗೆಟ್ಟಿರುವ ಉಪ್ಪಿನಂಗಡಿ–ಗುರುವಾಯನಕೆರೆ ರಾಜ್ಯ ಹೆದ್ದಾರಿ (SH-118) ಮರು ಡಾಮರೀಕರಣ ಸೇರಿದಂತೆ ತಾಲೂಕಿನ ಪ್ರಮುಖ ರಸ್ತೆಗಳನ್ನು ಆದ್ಯತೆಯ ಮೇರೆಗೆ ದುರಸ್ತಿಗೊಳಿಸುವಂತೆ ಆಗ್ರಹಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ನಿಯೋಗವು ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿತು.

ಹೆದ್ದಾರಿಯಲ್ಲಿನ ಗುಂಡಿಗಳಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದ ನಿಯೋಗವು, ತಾತ್ಕಾಲಿಕ ತೇಪೆ ಕಾಮಗಾರಿಗೆ ಬದಲಾಗಿ ಸಮಗ್ರ ಮರು ಡಾಮರೀಕರಣ ನಡೆಸುವಂತೆ ಒತ್ತಾಯಿಸಿತು.

ಅಲ್ಲದೆ, ತಾಲೂಕಿನ ಗುರುವಾಯನಕೆರೆ, ಮೂಡುಬಿದಿರೆ, ಕೊಲ್ಲಿ ದೇವಸ್ಥಾನ ಹಾಗೂ ಕಾಜೂರು ದರ್ಗಾಕ್ಕೆ ಸಂಪರ್ಕ ಕಲ್ಪಿಸುವ ಲಾಯಿಲ–ಕಿಲ್ಲೂರು ರಸ್ತೆಯ ದುರಸ್ತಿಗೂ ಆದ್ಯತೆ ನೀಡುವಂತೆ ಮನವಿ ಮಾಡಲಾಯಿತು.

ಮನವಿಗೆ ಸ್ಪಂದಿಸಿದ ಸಚಿವ ಸತೀಶ್ ಜಾರಕಿಹೊಳಿ ಅವರು ರಸ್ತೆ ಮರು ಡಾಮರೀಕರಣ ಕಾಮಗಾರಿಯನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳುವ ಭರವಸೆ ನೀಡಿದರು.

ನಿಯೋಗದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರಾದ ಇನಾಸ್ ರೋಡ್ರಿಗಸ್, ಕ್ಷೇತ್ರ ಉಪಾಧ್ಯಕ್ಷರಾದ ನಿಸಾರ್ ಕುದ್ರಡ್ಕ ಹಾಗೂ ಕಣಿಯೂರು ಬ್ಲಾಕ್ ಅಧ್ಯಕ್ಷರಾದ ಆಸೀಫ್ ಬಂಗೇರಕಟ್ಟೆ ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version