Home ಸ್ಥಳೀಯ ಸಮಾಚಾರ ಪಟ್ರಮೆ ನಿವಾಸಿ ಐ.ಟಿ.ಐ ವಿದ್ಯಾರ್ಥಿ ಆತ್ಮಹತ್ಯೆ

ಪಟ್ರಮೆ ನಿವಾಸಿ ಐ.ಟಿ.ಐ ವಿದ್ಯಾರ್ಥಿ ಆತ್ಮಹತ್ಯೆ

5
0

ಬೆಳ್ತಂಗಡಿ: ಪಟ್ರಮೆ  ದೇವಸಕೋಡಿ ನಿವಾಸಿ ಹರ್ಷಿತ್ (18ವ) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ. 27 ರಂದು ನಡೆದಿದೆ.ಮೃತ ಹರ್ಷಿತ್ ಮಾಲಾಡಿಯಲ್ಲಿ ದ್ವಿತೀಯ ವರ್ಷದ ಐಟಿಐ (ITI) ವಿದ್ಯಾಭ್ಯಾಸ ಮಾಡುತ್ತಿದ್ದರು. ನವೆಂಬರ್ 26ರಂದು ಬೆಳಿಗ್ಗೆ ಮನೆಯಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ತಕ್ಷಣವೇ ಕುಟುಂಬಸ್ಥರು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

ಪರಿಸ್ಥಿತಿ ಗಂಭೀರವಾಗಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ವೈದ್ಯರ ನಿರಂತರ ಪ್ರಯತ್ನದ ನಡುವೆಯೂ ಚಿಕಿತ್ಸೆ ಫಲಕಾರಿಯಾಗದೆ ಹರ್ಷಿತ್ ನ.27ರಂದು ಕೊನೆಯುಸಿರೆಳೆದಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮೃತರು ತಾಯಿ ಚೆಲುವಮ್ಮ ಹಾಗೂ ಸಹೋದರಿ ಪ್ರತೀಕ್ಷಾ ಅವರನ್ನು ಅಗಲಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here