Home ಅಪಘಾತ ಚಾರ್ಮಾಡಿ;  ಮನೆಗೆ ನುಗ್ಗಿದ ಟಿ.ಟಿ ವಾಹನ

ಚಾರ್ಮಾಡಿ;  ಮನೆಗೆ ನುಗ್ಗಿದ ಟಿ.ಟಿ ವಾಹನ

0

ಬೆಳ್ತಂಗಡಿ:ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನವು ಮನೆಯ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಘಟನೆ ಚಾರ್ಮಾಡಿ ಚೆಕ್‌ ಪೋಸ್ಟ್ ಬಳಿ ನ.28 ರಂದು ಸಂಜೆ ನಡೆದಿದೆ.

ಚಾರ್ಮಾಡಿಯಿಂದ ಉಜಿರೆ ಕಡೆಗೆ ಬರುತ್ತಿದ್ದ ಟಿಟಿ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನದ ಮುಂಭಾಗ ಜಖಂಗೊಂಡಿದ್ದು, ಮನೆಗೂ ಹಾನಿಯಾಗಿದೆ.
ಘಟನೆಯ ಸಮಯದಲ್ಲಿ ಮನೆಯಲ್ಲಿ ಒಬ್ಬರು ಮಾತ್ರ ಇದ್ದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ವಾಹನದಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಘಟನೆಯಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

NO COMMENTS

LEAVE A REPLY

Please enter your comment!
Please enter your name here

Exit mobile version