Home ಅಪರಾಧ ಲೋಕ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಬಂಧನ ಹಾಗೂ 810 ಗ್ರಾಂ ಗಾಂಜಾ ಹಾಗು ವಾಹನಗಳು ವಶಕ್ಕೆ

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಬಂಧನ ಹಾಗೂ 810 ಗ್ರಾಂ ಗಾಂಜಾ ಹಾಗು ವಾಹನಗಳು ವಶಕ್ಕೆ

57
0

ಬಂಟ್ವಾಳ; ತುಂಬೆ ಗ್ರಾಮದ ಹನುಮ ನಗರ ಎಂಬಲ್ಲಿ ಅಕ್ತಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು ಆರೋಪಿಗಳಿಂದ 810ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ‌ ಆರೋಪಿಗಳು ಬಂಟ್ವಾಳ ತುಂಬೆ ನಿವಾಸಿ ಸಮೀರ್‌(31) ಹಾಗೂ ಬಂಟ್ವಾಳ ಗೂಡಿನ ಬಳಿ ನಿವಾಸಿ ಮೊಹಮ್ಮದ್ ಆಸಿಫ್ (35) ಎಂಬಾತನಾಗಿದ್ದಾನೆ ಇವರಿಂದ 810ಗ್ರಾಂ ಗಾಂಜಾವನ್ನು ಹಾಗೂ ಗಾಂಜಾ ಸಾಗಾಟಕ್ಕೆ ಉಪಯೋಗಿಸಿದ ಒಂದು ರಿಕ್ಷಾ ಹಾಗೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
13.12.2025 ರಂದು ಸಂಜೆ, ಬಂಟ್ವಾಳ, ತುಂಬೆ ಗ್ರಾಮದ ಹನಮನಗರ ಎಂಬಲ್ಲಿ, ರಾಷ್ಟ್ರೀಯ ಹೆದ್ದಾರಿ ಬಳಿ ಯಾರೋ ವ್ಯಕ್ತಿಗಳು ಅಕ್ರಮವಾಗಿ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡಲು ವಶದಲ್ಲಿಟ್ಟುಕೊಂಡಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಮಂಜುನಾಥ ಟಿ, ಪೊಲೀಸ್ ಉಪ ನಿರೀಕ್ಷಕರು (ಕಾ&ಸು), ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ರವರು, ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ರಾಷ್ಟ್ರೀಯ ಹೆದ್ದಾರಿಯ ಪಕ್ಕ ನಿರ್ಜನ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು KA-19-MN-3664 ನೇ ನೊಂದಣಿ ಸಂಖ್ಯೆಯ ಕಾರು ಮತ್ತು KA-19-AE-0166 ನೇ ನೊಂದಣಿ ಸಂಖ್ಯೆಯ ಆಟೋ ರಿಕ್ಷಾದ ಬಳಿ ಅನುಮಾನಾಸ್ಪದವಾಗಿ ನಿಂತುಕೊಂಡಿದ್ದು, ಅವರುಗಳನ್ನು ಹಿಡಿದು ವಿಚಾರಿಸಲಾಗಿ, ಒಬ್ಬಾತ ಬಂಟ್ವಾಳ ತುಂಬೆ ನಿವಾಸಿ ಸಮೀರ್ (31) ಹಾಗೂ ಮತ್ತೋರ್ವ ಬಂಟ್ವಾಳ ಗೂಡಿನ ಬಳಿ ನಿವಾಸಿ ಮೊಹಮ್ಮದ್ ಅಸೀಫ್ (35) ಎಂಬುದಾಗಿ ತಿಳಿಸಿರುತ್ತಾರೆ. ವಿಚಾರಣೆಯ ವೇಳೆ ತಾವುಗಳು ಅಧಿಕ ಹಣಗಳಿಸುವ ಉದ್ದೇಶದಿಂದ ನಿಷೇಧಿತ ಮಾದಕವಸ್ತುವಾದ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವುದಾಗಿ ಒಪ್ಪಿಕೊಂಡಿದ್ದು, ತಪಾಸಣೆ ನಡೆಸಿದಾಗ ಕಾರಿನಲ್ಲಿ 450 ಗ್ರಾಂ. ಗಾಂಜಾ ಹಾಗೂ ರಿಕ್ಷಾದಲ್ಲಿ 360 ಗ್ರಾಂ ಗಾಂಜಾ ಪತ್ತೆಯಾಗಿರುತ್ತದೆ.

ಮುಂದಿನ ಕಾನೂನು ಕ್ರಮಕ್ಕಾಗಿ ಸದ್ರಿ ವಾಹನಗಳನ್ನು ಹಾಗೂ 810 ಗ್ರಾಂ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸ್ವಾಧೀನಪಡಿಸಲಾಗಿದ್ದು, ಆರೋಪಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ ಕ್ರ : 183/2025 ಕಲಂ: 8(C), 20(B) ii (a) NDPS Act ಅಡಿಯಲ್ಲಿ ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ

LEAVE A REPLY

Please enter your comment!
Please enter your name here