
ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ರವಿವಾರ ಸಂಜೆ(ಡಿ.14) ವಿಧಿವಶರಾಗಿದ್ದಾರೆ.
ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ಆರು ಬಾರಿ ಶಾಸಕರಾಗಿದ್ದು ಹಲವು ಬಾರಿ ಸಚಿವರಾಗಿದ್ದರು








