Home ಬ್ರೇಕಿಂಗ್‌ ನ್ಯೂಸ್ ಬೆಳ್ತಂಗಡಿ : ಜೀವ ಬೆದರಿಕೆ ಹಾಕಬಹುದು ಎಂದು ಮಹೇಶ್ ಶೆಟ್ಟಿ ಹಾಗೂ ಇತರರ ವಿರುದ್ದ ಧರ್ಮಸ್ಥಳ...

ಬೆಳ್ತಂಗಡಿ : ಜೀವ ಬೆದರಿಕೆ ಹಾಕಬಹುದು ಎಂದು ಮಹೇಶ್ ಶೆಟ್ಟಿ ಹಾಗೂ ಇತರರ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ ಚಿನ್ನಯ್ಯ

0
27

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಜೈಲು ಸೇರಿ ಹೊರಬಂದ ಬುರುಡೆ ಚಿನ್ನಯ್ಯ ಇದೀಗ ಮಹೇಶ್ ಶೆಟ್ಟಿ ಹಾಗೂ ಇತರ ನಾಲ್ವರು ತಮಗೆ ಜೀವಬೆದರಿಕೆ ಹಾಕಬಹುದು ಆದ್ದರಿಂದ ತನಗೆ ರಕ್ಷಣೆ ನೀಡಬೇಕು ಎಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ದೂರು ಅರ್ಜಿ ಸಲ್ಲಿಸಿದ್ದಾನೆ.
ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿ ಡಿ‌.18 ರಂದು ಶಿವಮೊಗ್ಗ ಜೈಲಿನಿಂದ ಬಂದ ಚಿನ್ನಯ್ಯ ತನ್ನ ಪತ್ನಿ ಮಲ್ಲಿಕಾ ಮತ್ತು ಸಹೋದರಿ ರತ್ನ ಜೊತೆ ಡಿ‌.18 ರಂದು ರಾತ್ರಿ 8 ಗಂಟೆಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್. ಟಿ, ಯೂಟ್ಯೂಬರ್ ಸಮೀರ್.ಎಮ್.ಡಿ, ಸೌಜನ್ಯ ಮಾವ ವಿಠಲ್ ಗೌಡ, ಗಿರೀಶ್ ಮಟ್ಟಣ್ಣವರ್ ಹಾಗೂ ಸಂಗಡಿಗರಿಂದ ತನಗೆ ಮತ್ತು ತನ್ನ ಪತ್ನಿ ಮಲ್ಲಿಕಾ ಯಾನೆ ನಾಗಮ್ಮ ಗೆ ಜೀವಬೆದರಿಕೆ ಹಾಕಬಹುದು ಆದ್ದರಿಂದ ಸೂಕ್ತ ಕಾನೂನು ಕ್ರಮ ಕೈಗೊಂಡು ಯಾವುದೇ ತೊಂದರೆಯಾಗದಂತೆ ರಕ್ಷಣೆ ಕೊಡುವ ಬಗ್ಗೆ ದೂರು ನೀಡಿದ್ದು ಅದರಂತೆ ಧರ್ಮಸ್ಥಳ ಪೊಲೀಸರು ಪಿಟಿಷನ್ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ತಿಳಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here