Home ಅಪಘಾತ ಲಾಯಿಲ ಸಂಚರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ ಸವಾರನಿಗೆ ಗಂಭೀರ ಗಾಯ

ಲಾಯಿಲ ಸಂಚರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ ಸವಾರನಿಗೆ ಗಂಭೀರ ಗಾಯ

1
0

ಬೆಳ್ತಂಗಡಿ : ಸಂಚರಿಸುತ್ತಿದ್ದ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ಮಾಡಿದ್ದು‌. ಬೈಕ್ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕೂಡೇಲು ನಿವಾಸಿ ವೆಂಕಪ್ಪ ಪೂಜಾರಿಯ ಮಗ ಸುಕೇಶ್(31) ಎಂಬಾತ ಬೈಕ್ ಶೋರೂಂ ನಲ್ಲಿ ಕೆಲಸ ಮಾಡುತ್ತಿದ್ದು ಎಂದಿನಂತೆ ಬೆಳ್ತಂಗಡಿಯಿಂದ ಕೆಲಸ ಮುಗಿಸಿ ಡಿ.26 ರಂದು ರಾತ್ರಿ ಸುಮಾರು 8:45 ಕ್ಕೆ ಮನೆ ಕಡೆ ಬೈಕ್ ನಲ್ಲಿ ಬರುತ್ತಿದ್ದಾಗ ಲಾಯಿಲ ಗ್ರಾಮದ ಅಲೆಕ್ಕಿ ರಸ್ತೆಯಲ್ಲಿ ಏಕಾಏಕಿ ಕಾಡುಕೋಣ ಕಾಡಿನಿಂದ ಇಳಿದು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಸಂಚರಿಸುತ್ತಿದ್ದಾಗ ಮುಖಮುಖಿ ದಾಳಿ ಮಾಡಿದೆ.

ಕಾಡುಕೋಣ ದಾಳಿ ತೀವ್ರತೆಗೆ ಬೈಕ್ ಸವಾರ ಸುಕೇಶ್ ಅವರ ಕಾಲು ಮತ್ತು ಕೈಗೆ ಸೇರಿದಂತೆ ವಿವಿಧ ದೇಹದ ಭಾಗಗಳಿಗೆ ಗಂಭೀರ ಗಾಯವಾಗಿದ್ದು ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು ಪ್ರಾಣಪಾಯದಿಂದ ಸುಕೇಶ್ ಪಾರಾಗಿದ್ದಾರೆ. ಕಾಡುಕೋಣ ದಾಳಿಗೆ ಬೈಕ್ ಗೆ ಹಾನಿಯಾಗಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ವಲಯ ಅರಣ್ಯ ಅಧಿಕಾರಿಗಳು ಮತ್ತು ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜೆ ಡಿ.27 ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here