
ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಭೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ,ಸುಮಂತ್ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮುಂಜಾನೆ ಧನುಪೂಜೆಗೆ ತೆರಳಿದ್ದ ಸಂದರ್ಭದಲ್ಲಿ,ಅಸಹಜವಾಗಿ
ರೀತಿಯಲ್ಲಿ ಸಾವನ್ನಪ್ಪಿದ್ದು. ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ.
ಮೃತ ಬಾಲಕನ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಹೆತ್ತವರು, ಕುಟುಂಬ ಸದಸ್ಯರಿಗೆ ಸಾಂತ್ವನ ತಿಳಿಸಿದರು.
ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಕುಮಾರ್ ಬಿ, ಶ್ರೀಮತಿ ಶ್ವೇತಾ , ಶ್ರೀಮತಿ ಮರಿಟಾ ಪಿಂಟೋ, ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುನೀತ್ ಕುಮಾರ್, ಪ್ರಮುಖರಾದ ಶ್ರೀಮತಿ ಲೋಕೇಶ್ವರಿ ವಿನಯ ಚಂದ್ರ ಗೌಡ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಶ್ರೀಮತಿ ಸೌಮ್ಯ ಲಾಯಿಲ ಹಾಗೂ ಪ್ರಮುಖರು ಉಪಸ್ಥಿತರಿದ್ದರು.









