Home ರಾಜಕೀಯ ಸಮಾಚಾರ ಸುಮಂತ್ ಕೊಲೆ ಪ್ರಕರಣ ಸಮಗ್ರ ತನಿಖೆ ಶಾಸಕ ಹರೀಶ್ ಪೂಂಜ ಒತ್ತಾಯ

ಸುಮಂತ್ ಕೊಲೆ ಪ್ರಕರಣ ಸಮಗ್ರ ತನಿಖೆ ಶಾಸಕ ಹರೀಶ್ ಪೂಂಜ ಒತ್ತಾಯ

1
0

ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ ಎನ್ನುವ ಬಾಲಕನ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ತನಿಖೆಯನ್ನು ಅತ್ಯಂತ ಕೂಲಂಕುಷವಾಗಿ ನಡೆಸಿ ಶೀಘ್ರದಲ್ಲಿ ಸತ್ಯಾ ಸತ್ಯತೆಯನ್ನು ಜನರ ಮುಂದಿಡಬೇಕೆಂದು ಶಾಸಕ ಹರೀಶ್ ಪೂಂಜರವರು ಗೃಹ ಸಚಿವರಾದ ಜಿ ಪರಮೇಶ್ವರ್ ರವರಿಗೆ ಆಗ್ರಹಿಸಿದರು.

ಸುಮಂತ್‌ನ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗುತ್ತಿದ್ದು, ಕುಟುಂಬಸ್ಥರು ಹಾಗೂ ಸ್ಥಳೀಯ ಸಾರ್ವಜನಿಕರು ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಲೋಪದೋಷಗಳು ನಡೆಯದಂತೆ, ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಶೀಘ್ರದಲ್ಲೇ ನಿಖರವಾದ ಸತ್ಯವನ್ನು ಜನರ ಮುಂದಿಡಬೇಕು ಎಂದು ಶಾಸಕರು ಗೃಹ ಸಚಿವರನ್ನು ಭೇಟಿಯಾಗಿ ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here