ಬೆಳ್ತಂಗಡಿ; ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ದ.ಕ ಜಿಲ್ಲಾ ಚುನಾವಣಾ ಅಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮಲೈ ಮುಗಿಲನ್ ಅವರು ಉಜಿರೆಯ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರಚಿಸಲಾಗಿರುವ ಮಸ್ಟರಿಂಗ್ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚುನಾವಣಾ ಕರ್ತವ್ಯಕ್ಕೆ ತೆರಳಲು ಸಿದ್ದರಾದ ಸಿಬ್ಬಂದಿ ಗಳೊಂದಿಗೆ ಮಾತುಕತೆ ನಡೆಸಿದ ಅವರು ವಿವಿಧ ವಿಚಾರಗಳ ಬಗ್ಗೆ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಸಹಾಯಕ ಚುನಾವಣಾ ಅಧಿಕಾರಿ ಕೆಂಪೇಗೌಡ ತಹಶೀಲ್ದಾರ್ ಪೃಥ್ವಿ ಸಾನಿಕಮ್ ಹಾಗೂ ಇತರ ಅಧಿಕಾರಿಗಳು ಇದ್ದರು