ಬೆಳ್ತಂಗಡಿ; ತೋಟತ್ತಾಡಿ ಗ್ರಾಮದ ವಿವಿಧ ಪ್ರದೇಶಗಳಲ್ಲಿ ಭಾರೀ ಗಾಳಿ ಮಳೆಗೆ ಕೃಷಿಗೆ ಹಾಗೂ ಮನೆಗಳಿಗೆ ವ್ಯಾಪಕವಾಗಿ ಹಾನಿ ಸಂಭವಿಸಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಈ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯಾಗಿರುವುದನ್ನು ವೀಕ್ಷಿಸಿದರು ಸಂತ್ರಸ್ತರೊಂದಿಗೆ ಮಾತು ಕತೆ ನಡೆಸಿದ ಅವರು ಹಾನಿಯಾಗಿರುವ ಬೆಳಗೆ ಕೂಡಲೇ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸ್ಥಳೀಯ ಮುಖಂಡರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.







