
ಬೆಳ್ತಂಗಡಿ, ಮಾರ್ಚ್ .03:
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಡಿರುದ್ಯಾವರ ಗ್ರಾಮದ ಕುಕ್ಕುದಡಿ ಪ್ರದೇಶದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರವು ರೂ.1.00 ಕೋಟಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.
ಈ ಕಾಮಗಾರಿಯಿಂದ ಕೃಷಿ ಜಮೀನುಗಳಿಗೆ ಸಮರ್ಪಕ ನೀರಾವರಿ ಸೌಲಭ್ಯ ಲಭಿಸುವುದರ ಜೊತೆಗೆ ಸೇತುವೆ ನಿರ್ಮಾಣದಿಂದ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರ ವ್ಯವಸ್ಥೆಯೂ ಒದಗಲಿದೆ.
ಈ ಮಹತ್ವದ ಯೋಜನೆಗೆ ಅನುಮೋದನೆ ನೀಡಿದ ರಾಜ್ಯ ಸರ್ಕಾರಕ್ಕೆ ಹಾಗೂ ವಿಶೇಷ ಸಹಕಾರ ನೀಡಿದ ಮಾನ್ಯ ಸಣ್ಣ ನೀರಾವರಿ ಸಚಿವರಿಗೆ ಶಾಸಕ ಹರೀಶ್ ಪೂಂಜ ಅವರು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.








