Home ಕ್ರೀಡಾ ಸಮಾಚಾರ ಮಾ.15 ಬಂಗಾಡಿ- ಕೊಲ್ಲಿ ಕಂಬಳ; ಸಮಿತಿ ಅಧ್ಯಕ್ಷ ರಂಜನ್ ಗೌಡ ಮಾಹಿತಿ

ಮಾ.15 ಬಂಗಾಡಿ- ಕೊಲ್ಲಿ ಕಂಬಳ; ಸಮಿತಿ ಅಧ್ಯಕ್ಷ ರಂಜನ್ ಗೌಡ ಮಾಹಿತಿ

1
0


ಪ್ರಕೃತಿಯ ಮಡಿಲಲ್ಲಿ ಕುದುರೆಮುಖ ಬೆಟ್ಟಗಳ ನಡುವೆ ನೇತ್ರಾವತಿ ನದಿ ಕಿನಾರೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದ ಗಳೊಂದಿಗೆ ಮಾ. 15ರಂದು 28ನೇ ವರ್ಷದ ಬಂಗಾಡಿ- ಕೊಲ್ಲಿ 28ನೇ ವರ್ಷದ ಹೊನಲು ಬೆಳಕಿನ ಕಂಬಳ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ರಂಜನ್ ಜಿ.ಗೌಡ ಹೇಳಿದರು.
ಉಜಿರೆಯ ಖಾಸಗಿ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸೂರ್ಯ-ಚಂದ್ರ ಜೋಡುಕೆರೆ ಕಂಬಳ ಸಮಿತಿ,ರಾಜ್ಯ ಕಂಬಳ ಅಸೋಸಿಯೇಷನ್, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ ನಡೆಯುವ ಕಂಬಳದ ಉದ್ಘಾಟನೆಯನ್ನು ಬೆಳಿಗ್ಗೆ 8.30ಕ್ಕೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ನೆರವೇರಿಸುವರು. ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ಅಧ್ಯಕ್ಷತೆ ವಹಿಸುವರು. ಎಸ್ ಕೆ ಡಿ ಆರ್ ಡಿ ಪಿಯ ಕಾರ್ಯನಿರ್ವಹಣಾ ನಿರ್ದೇಶಕ ಅನಿಲ್ ಕುಮಾರ್ ಎಸ್. ಎಸ್., ಅಳದಂಗಡಿ ಶ್ರೀ ಸತ್ಯ ದೇವತೆ- ಕಲ್ಲುರ್ಟಿ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜೀಲ, ತಹಸೀಲ್ದಾರ್ ಪೃಥ್ವಿ ಸಾನಿಕಂ, ಡಿವೈಎಸ್ಪಿ ರೋಹಿಣಿ ಸಿ.ಕೆ., ಪಶುವೈದ್ಯಾಧಿಕಾರಿ ಡಾ. ರವಿಕುಮಾರ್ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಜೆ 6.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಚಿವ ಕೆ. ಗಂಗಾಧರ ಗೌಡ ವಹಿಸಲಿದ್ದಾರೆ ವಿಧಾನ ಸಭಾಧ್ಯಕ್ಷ ಯು‌ ಟಿ.ಖಾದರ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ರಮಾನಾಥ ರೈ, ಪುತ್ತೂರು ಶಾಸಕ ಅಶೋಕ್ ಕುಮಾರ್, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಎಂಎಲ್‌ ಸಿಗಳಾದ ಪ್ರತಾಪ ಸಿಂಹ ನಾಯಕ್, ಕಿಶೋರ್ ಕುಮಾರ್ ಬೊಟ್ಯಾಡಿ, ಐವನ್ ಡಹೆಚ್ಚಿನಉದ್ಯಮಿ ಶಶಿಧರ ಶೆಟ್ಟಿ ಬರೋಡ, ಶ್ರೀ ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ,, ಬದುಕು ಕಟ್ಟೋಣ ಬನ್ನಿ ತಂಡದ ಮುಖ್ಯಸ್ಥ ಕೆ.ಮೋಹನ್ ಕುಮಾರ್ ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ ಕುಮಾರ್ ಜೈನ್, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಸೇರಿದಂತೆ ಅನೇಕ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಒಟ್ಟು 6 ವಿಭಾಗಗಳಲ್ಲಿ ನಡೆಯುವ ಕಂಬಳದಲ್ಲಿ ಏಳೂವರೆ ಪವನ್ ಚಿನ್ನವನ್ನು ಬಹುಮಾನವಾಗಿ ನೀಡಲಾಗುತ್ತದೆ ಎಂದು ತಿಳಿಸಿದರು.‌ಉಭಯ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಂಬಳದ ಕೋಣಗಳು ಕಂಬಳದಲ್ಲಿ ಭಾಗವಹಿಸಲಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ, ಉದ್ಯಮಿ ಪುಷ್ಪರಾಜ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಕಿಶೋರ್ ವಳಂಬ್ರ, ಪ್ರಶಾಂತ್ ಪೂಜಾರಿ ಕೊಕ್ಕರ್ಣೆ, ಜತೆ ಕಾರ್ಯದರ್ಶಿ ಭರತ್ ಬಂಗಾಡಿ,ಮಧುಕರ ಸುವರ್ಣ ಹಾಗೂ ದಿನೇಶ್ ಗೌಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here