Home ಸ್ಥಳೀಯ ಸಮಾಚಾರ ಬೆಳ್ತಂಗಡಿ;  ಕನ್ಯಾಡಿ ಶ್ರೀರಾಮಕ್ಷೇತ್ರದಲ್ಲಿ ಶ್ರೀ ರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ

ಬೆಳ್ತಂಗಡಿ;  ಕನ್ಯಾಡಿ ಶ್ರೀರಾಮಕ್ಷೇತ್ರದಲ್ಲಿ ಶ್ರೀ ರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ

0
6

ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ನಿತ್ಯಾನಂದ ನಗರ ಶ್ರೀ ರಾಮ ಭಗವಾನ್ ನಿತ್ಯಾನಂದ ದೇವಸ್ಥಾನದಲ್ಲಿ ಮಾ. 20 ರಿಂದ ಮಾ. 27ರ ವರೆಗೆ ನಡೆಯಲಿರುವ 66 ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಹಾಗೂ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಕ್ಷೇತ್ರದ ನಿರ್ಮಾತೃ ಜಗದ್ಗುರು ಅತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ದಿವ್ಯ ನೇತೃತ್ವದಲ್ಲಿ ಮಾ.20ರಂದು ಶ್ರೀ ರಾಮ ನಾಮ ಭಜನಾ ಸಪ್ತಾಹದ ಅಖಂಡ ನಂದಾ ದೀಪ ಬೆಳಗುವ ಮೂಲಕ ಚಾಲನೆ ದೊರೆಯಿತು.
ಕಾರ್ಯಕ್ರಮದಲ್ಲಿ ದ. ಕ. ಸಂಸದ ಬ್ರೇಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್, ಜಿಲ್ಲಾ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್, ಗುರುದೇವ ಮಠ ಟ್ರಷ್ಟಿ ಸುಜೀತಾ ವಿ. ಬಂಗೇರ,ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಪ್ರಮುಖರಾದ ಸಂಜೀವ ಪೂಜಾರಿ ಬಿರ್ವ ಸೆಂಟರ್, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ತಿಮ್ಮಪ್ಪ ಗೌಡ ಬೆಳಾಲು, ಬೆಳ್ತಂಗಡಿ ಶ್ರೀ ಗುರುದೇವ ವಿವಿದೊದ್ದೇಶ ಸಹಕಾರ ಸಂಘದ ಅಧ್ಯಕ್ಷ ಭಗೀರಥ ಜಿ., ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ಬೆಳ್ತಂಗಡಿ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ್‌ ರಾವ್., ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಶ್ರೀ ರಾಮ ಕ್ಷೇತ್ರ ಸಮಿತಿ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ರಾಜೇಶ್ ಪೂಜಾರಿ ಮೂಡುಕೋಡಿ, ರತ್ನಾಕರ ಬುನ್ನಾನ್, ಧರ್ಮಸ್ಥಳ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ., ನಿರ್ದೇಶಕ ನೀಲಕಂಠ ಶೆಟ್ಟಿ, ಗ್ರಾ. ಪ. ಮಾಜಿ ಸದಸ್ಯ ಹರೀಶ್ ಸುವರ್ಣ ಕನ್ಯಾಡಿ, ಮಂಗಳೂರು ಮಹಾ ನಗರ ಪಾಲಿಕೆ ಸದಸ್ಯ ಕಿರಣ್ ಕುಮಾರ್, ಉಜಿರೆ ಗ್ರಾಮ ಪ. ಮಾಜಿ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಬಾಲಕೃಷ್ಣ ಶೆಟ್ಟಿ ಸವಣಾಲು, ವಾಣಿಜ್ಯ ತೆರಿಗೆ ಅಧಿಕಾರಿ ರಾಜು ನಾಯ್ಕ, ಪುರುಷೋತ್ತಮ ಧರ್ಮಸ್ಥಳ
ಶ್ರೀ ರಾಮ ಕ್ಷೇತ್ರ ಮಹಿಳಾ ಸಮಿತಿ ಸಂಚಾಲಕಿ ಸುಜಾತಾ ಅಣ್ಣಿ ಪೂಜಾರಿ, ಚಿದಾನಂದ ಇಡ್ಯಾ, ಸುನಿಲ್ ಕನ್ಯಾಡಿ, ರವೀಂದ್ರ ಪೂಜಾರಿ ಆರ್ಲ, ತುಕಾರಾಮ ಸಾಲಿಯಾನ್ ಆರ್ಲ, ಕೃಷ್ಣಪ್ಪ ಗುಡಿಗಾರ ಶ್ರೀ ರಾಮ ಕ್ಷೇತ್ರ ಸಮಿತಿ ಪದಾಧಿಕಾರಿಗಳು ಗುರುದೇವ ಮಠ ಟ್ರಷ್ಟಿ, ಮತ್ತು ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ಟ್ರಸ್ಟ್ ಟ್ರಸ್ಟಿಗಳು, ರಾಮ ಕ್ಷೇತ್ರ ಅಭಿವೃದ್ಧಿ ಸಮಿತಿ ಸದಸ್ಯರು.ವಿವಿಧ ಭಜನಾ ಮಂಡಳಿ ಸದಸ್ಯರು, ರಥ ಬೀದಿ ವ್ಯಾಪಾರಸ್ಥರು,ಭಕ್ತರು ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here