Home ಅಪಘಾತ ಗೇರುಕಟ್ಟೆ:ಚಲಿಸುತ್ತಿದ್ದ ಬಸ್ಸಿನಿಂದ  ರಸ್ತೆಗೆ ಎಸೆಯಲ್ಪಟ್ಟ ಇಬ್ನರು ವಿಧ್ಯಾರ್ಥಿನಿಯರು

ಗೇರುಕಟ್ಟೆ:ಚಲಿಸುತ್ತಿದ್ದ ಬಸ್ಸಿನಿಂದ  ರಸ್ತೆಗೆ ಎಸೆಯಲ್ಪಟ್ಟ ಇಬ್ನರು ವಿಧ್ಯಾರ್ಥಿನಿಯರು

1
0

ಬೆಳ್ತಂಗಡಿ:ಶಾಲೆಗೆ ತೆರಳುತಿದ್ದ ಒಂದೇ ಮನೆಯ ಇಬ್ಬರು ವಿದ್ಯಾರ್ಥಿಗಳು ಬಸ್ ನಿಂದ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಘಟನೆ ಕಳಿಯ ಗ್ರಾಮದ ಗೇರುಕಟ್ಟೆ ಬಳಿ ನಡೆದಿದೆ.

ಬೆಳಿಗ್ಗೆ ಎಂದಿನಂತೆ ಗೇರುಕಟ್ಟೆಯಿಂದ ಬೆಳ್ತಂಗಡಿ ಶಾಲೆಗೆ ತೆರಳಲು ಕೆಎಸ್ ಆರ್ ಟಿ ಸಿ ಬಸ್ ಗೆ ಹತ್ತಿದ್ದು, ರೇಷ್ಮೆ ರೋಡ್ ಎಂಬಲ್ಲಿ ಒಮ್ಮೆಲೆ ಬಸ್ ಬಾಗಿಲು ತೆರೆಯಲ್ಪಟ್ಟು ಇಬ್ಬರೂ ನಿಯಂತ್ರಣ ತಪ್ಪಿ ಕೆಳಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಬೆಳ್ತಂಗಡಿ ಹಾಗೂ ಉಜಿರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಮಾಹಿತಿ ಪ್ರಕಾರ ಓರ್ವ ವಿದ್ಯಾರ್ಥಿನಿ ಎಸ್ ಎಸ್ ಎಲ್.ಸಿ ಪರೀಕ್ಷೆಗೆ ತೆರಳುತಿದ್ದು ಮತ್ತೊಬ್ಬಳು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತಿದ್ದು, ನ್ಯಾಯತರ್ಪು ಗ್ರಾಮದ ಕಲೈತೊಟ್ಟು ನಾಗರಾಜ ಹಾಗೂ ರೂಪ ದಂಪತಿಗಳ ಮಕ್ಕಳಾಗಿದ್ದು ಮಕ್ಕಳಿಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಮಕ್ಕಳು,ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here