Home ಅಪರಾಧ ಲೋಕ ಹೈಡ್ರೊವಿಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟಕ್ಕೆ ಯತ್ನಿಸಿದ ಯುವತಿಯ ಬಂಧನ 35 ಲಕ್ಷ ಮೌಲ್ಯದ ಗಾಂಜಾ...

ಹೈಡ್ರೊವಿಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟಕ್ಕೆ ಯತ್ನಿಸಿದ ಯುವತಿಯ ಬಂಧನ 35 ಲಕ್ಷ ಮೌಲ್ಯದ ಗಾಂಜಾ ಮಾದಕ ದ್ರವ್ಯ ವಶಕ್ಕೆ

1
0

ಮಂಗಳೂರು; ಮುಲ್ಕಿ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೊವಿಡ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಯುವತಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಸುಹಾನ (21) ತಂದೆ: ದಿ|| ಮೊಹಮ್ಮದ ಗೌಸ್ ವಾಸ: ಹುಲಿದೇವರ ಬನ ಸಾಗರ ತಾಲೂಕು ಶಿವಮೋಗ್ಗ ಎಂಬಾಕೆಯಾಗಿದ್ದಾಳೆ ಈಕೆ ಇದೀಗ ಕುಂದಾಪುರ ಕಾಲೇಜಿನ ಅಂತಿಮ ವರ್ಷದ BCA ವಿದ್ಯಾರ್ಥಿನಿಯಾಗಿದ್ದಾಳೆ.

ಸುಹಾನಾಳನ್ನು ವಶಕ್ಕೆ ಪಡೆದು ಅವಳ ಬಳಿ ಇದ್ದ ಸುಮಾರು 35,00,000/- ರೂ ಮೌಲ್ಯದ ಸುಮಾರು 1 ಕೆಜಿ 42 ಗ್ರಾಮ್ ಹೈಡ್ರೊವಿಡ ಗಾಂಜಾ ಎಂಬ ಮಾದಕ ವಸ್ತುವನ್ನು ಹಾಗೂ ಕೃತ್ಯಕ್ಕೆ ಬಳಸಿದ ಮೊಬೈಲ್ ಪೋನ್ ಮತ್ತು ಇತರ ಸೊತ್ತು ವಶಪಡಿಸಿಕೊಳ್ಳಲಾಗಿದೆ. ಸದ್ರಿ ಮಾದಕ ವಸ್ತುವನ್ನು ಆರೋಪಿತೆಯು ಚೆನ್ನೈ ನಿಂದ ತರಿಸಿ ಕೊಂಡು ಮಂಗಳೂರಿನಲ್ಲಿ ಅಕ್ರಮವಾಗಿ ಪೂರೈಕೆ ಮಾಡಿ ಹಣ ಗಳಿಸುವ ಉದ್ದೇಶದಿಂದ ತಂದಿರುವುದಾಗಿ ತಿಳಿದು ಬಂದಿರುತ್ತದೆ. ಸದ್ರಿ ಆರೋಪಿತೆಯ ವಿರುದ್ದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 32/2026 ಕಲಂ: 8(ಸಿ), 20(ಬಿ) ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಪಣಂಬೂರು ACP ತಂಡ ಹಾಗೂ ಮೂಲ್ಕಿ ಠಾಣೆಯ ತಂಡ ದಿಂದ ಕಾರ್ಯಾಚರಣೆ ನಡೆಸಲಾಗಿದೆ.

ಆರೋಪಿತೆಯ ಮೇಲೆ ಈ ಹಿಂದೆಯೂ ಪ್ರಕರಣಗಳು ದಾಖಲಾಗಿತ್ತು.
1) ಕಾವೂರು ಪೊಲೀಸ್ ಠಾಣಾ ಅ. ಕ್ರ 37/2026 ಕಲಂ: 8(C), 22(C) NDPS Act.
2) ಬೆಂಗಳೂರು ಅಂತರಾಷ್ಟ್ರೀಯ ವಿಮಾನ ಕಸ್ಟಮ್ O. R No: 177/2025-26 U/S 20(b), 2(B), 23(b), 27(A) & 29 NDPS Act. ‌ನಂತೆ ಪ್ರಕರಣಗಳು ದಾಖಲಿಸಲಾಗಿತ್ತು

LEAVE A REPLY

Please enter your comment!
Please enter your name here