Home ಸ್ಥಳೀಯ ಸಮಾಚಾರ ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ ಆಚರಣೆ.

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ ಆಚರಣೆ.

0
4

ಬೆಳ್ತಂಗಡಿ; ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನವನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಆಶ್ರಮದ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಶಿವಾನಂದ ಸ್ವಾಮಿ ಅವರು ಮಾತನಾಡಿ, ದಾದಿಯರ ಸೇವೆಯ ಮಹತ್ವವನ್ನು ವಿವರಿಸಿದರು. ದಾದಿಯರು ಸಮಾಜದ ಆರೋಗ್ಯ ವ್ಯವಸ್ಥೆಯ ನಿಜವಾದ ಆಧಾರಸ್ತಂಭಗಳಾಗಿದ್ದು, ಅನಾರೋಗ್ಯ ಪೀಡಿತರ ಹಾಗೂ ಅಗತ್ಯವಿರುವವರ ಸೇವೆಯಲ್ಲಿ ಅಪಾರ ಸಹನೆ, ಪ್ರೀತಿ ಮತ್ತು ತ್ಯಾಗ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅವರು ತಿಳಿಸಿದರು. “ದಾದಿಯರ ಸೇವೆ ಮಾನವೀಯತೆಯ ಪ್ರತಿರೂಪವಾಗಿದ್ದು, ಅವರ ಸೇವೆ ದೇವರ ಸೇವೆಗೆ ಸಮಾನ” ಎಂದು ಅವರು ಅಭಿಪ್ರಾಯಪಟ್ಟರು. ಅವರ ನಿರಂತರ ಸೇವೆ ಹಾಗೂ ಕಾಳಜಿಯನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಆಶ್ರಮದ ಸಿಬ್ಬಂದಿ ದಾದಿಯರನ್ನು ಸನ್ಮಾನಿಸಿ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಬಳಿಕ ಕೇಕ್ ಕತ್ತರಿಸುವ ಕಾರ್ಯಕ್ರಮ ನಡೆಯಿತು. ಕರ್ಯಕ್ರಮದಲ್ಲಿ ಆಶ್ರಮದ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ವರ್ಗ, ಮಂಗಳೂರು ನರ್ಸಿಂಗ್ ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆಶ್ರಮದ ನಿವಾಸಿಗಳು ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here