ಬೆಳ್ತಂಗಡಿ : ಸಂಶಯಾಸ್ಪದವಾಗಿ ಯುವಕನೋರ್ಮ ಸಾವನ್ನಪ್ಪಿರುವ ಘಟನೆ ಕೊಕ್ಕಡ ಗ್ರಾಮದ ಡೆಂಜ ಸಮೀಪದ ಪೊಯ್ಯಲೆ ಎಂಬಲ್ಲಿ ನಡೆದಿದೆ. ಹರೀಶ್ (35) ಎಂಬಾತನೇ ಸಂಶಯಾಸ್ಪದ ವಾಗಿ ಮೃತಪಟ್ಟ ಯುವಕನಾಗಿದ್ದಾನೆ . ಘಟನೆ ಏ.25ರಂದು ಮಧ್ಯಾಹ್ನ ನಡೆದಿದೆ, ತಡವಾಗಿ ಬೆಳಕಿಗೆ ಬಂದಿದೆ.
ಮೃತ ಹರೀಶ್(35) ಮತ್ತು ಆತನ ತಂದೆ ಚೋಮ ಎಂಬವರು ಮನೆಯಲ್ಲಿ ಇಬ್ಬರೆ ವಾಸವಾಗಿದ್ದು, ತಾಯಿ ಈ ಹಿಂದೆ ನಿಧನ ಹೊಂದಿದ್ದರು.
ಹರೀಶ್ ಏ.25ರಂದು ಮಧ್ಯಾಹ್ನ ಮೃತಪಟ್ಟಿದ್ದರು. ತಂದೆ ಚೋಮರವರು ಯಾರನ್ನು ಹತ್ತಿರಕ್ಕೆ ಬಿಡದ ಕಾರಣ ಎ.26 ರಂದು ಮಧ್ಯಾಹ್ನ ವೇಳೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಮೃತ ದೇಹವನ್ನು ಬೆಳ್ತಂಗಡಿಗೆ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರೀಶ್ ಅವರ ಸಂಶಯಾಸ್ಪದ ರೀತಿಯಲ್ಲಿ ಸಾವನಪ್ಪಿರುವ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೆ ಈತನ ಸಾವಿಗೆ ಕಾರಣವೇನು ಎಂಬುದು ಸ್ಪಷ್ಟವಾಗಬೇಕಾಗಿದೆ