2025–26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ–2ರಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ಇಲ್ಲಿಯ ವಿದ್ಯಾರ್ಥಿನಿ ಮಾಧುರ್ಯ ಜಿ ಎಸ್ ಎಸ್ ಎಲ್ ಸಿ ಪರೀಕ್ಷೆ 1 ರಲ್ಲಿ 621 ಅಂಕ ಗಳಿಸಿದ್ದು, ಎಸ್ ಎಸ್ ಎಲ್ ಸಿ ಪರೀಕ್ಷೆ 2 ರಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ಶೇ.100 ಫಲಿತಾಂಶದೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಅವರ ಈ ಅಪೂರ್ವ ಸಾಧನೆ ಶಾಲೆ, ಪೋಷಕರು ಹಾಗೂ ಜಿಲ್ಲೆಯ ಹೆಮ್ಮೆಗೆ ಕಾರಣವಾಗಿದೆ. ಮಾಧುರ್ಯ ಅವರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಮತ್ತು ಪೋಷಕರ ಪ್ರೋತ್ಸಾಹದಿಂದ ಈ ಯಶಸ್ಸು ಸಾಧ್ಯವಾಗಿದೆ. ಅವರ ಸಾಧನೆ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ.




