Home ಅಪರಾಧ ಲೋಕ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

2
0


ಬೆಳ್ತಂಗಡಿ: ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಗೌರವ ಸನ್ಮಾನವು ಭಾನುವಾರ ಉಜಿರೆ,ಲಾಯಿಲ ಮತ್ತು ಅಳದಂಗಡಿಯಲ್ಲಿ ಜರುಗಿತು.
ಶಾಸಕ ಹರೀಶ್ ಪೂಂಜ ವಿದ್ಯಾರ್ಥಿಗಳನ್ನು ಗೌರವಿಸಿ ಮಾತನಾಡಿ,ಇಂದಿನ ವಿದ್ಯಾರ್ಥಿಗಳೇ ಭವಿಷ್ಯದ ಉಜ್ವಲ ಭಾರತವನ್ನು ಮುನ್ನಡೆಸುವ ಪ್ರತಿನಿಧಿಗಳು. ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯ. ಈ ಗೌರವ ಇನ್ನುಳಿದ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು.ವಿದ್ಯಾರ್ಥಿಗಳು,ಯುವ ಜನತೆ ದುಶ್ಚಟಗಳಿಗೆ ಬಲಿಯಾಗದೆ,ಪೋಷಕರ ಆಶಯಕ್ಕೆ ಪೂರಕವಾಗಿ ಜೀವನ ನಡೆಸಿ.ಎಐ ಯುಗದಲ್ಲಿ ಸ್ಪರ್ಧೆ ಮಾಡುವ ಮನೋಭಾವನೆ ಮೂಲಕ ಮುಂದುವರಿಯಿರಿ,ಶಿಸ್ತುಬದ್ಧ ಜೀವನ ಸಂಕಲ್ಪ ರೂಢಿಸಿಕೊಳ್ಳಿ ಎಂದು ಕಿವಿ ಮಾತು ಹೇಳಿದರು.


ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ಸಂಚಾಲಕ ಕೆ. ಮೋಹನ್ ಕುಮಾರ್ ಮಾತನಾಡಿ, ವಿದ್ಯೆಯ ಜತೆಗೆ ಸಂಸ್ಕಾರ ಅಗತ್ಯವಾಗಿದ್ದು, ಪೋಷಕರು ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸುವ ಕೆಲಸ ಮಾಡಬೇಕು ಎಂದರು.
ಸೇಕ್ರೇಟ್ ಹಾರ್ಟ್ ಕಾಲೇಜಿನ ನಿವೃತ್ತ ಪ್ರಿನ್ಸಿಪಾಲ್ ಡಾ.ಎಂ. ಎನ್. ಜೋಸೆಫ್ ಮಾತನಾಡಿ, ಎಲ್ಲರಿಗೂ ಯಶಸ್ಸಿನ ತುದಿಯನ್ನು ಏರುವುದಕ್ಕೆ ಅಸಾಧ್ಯ. ಆದರೆ ಅದಕ್ಕೆ ಇಂತಹ ಕಾರ್ಯಕ್ರಮ ಪ್ರೇರಣೆಯಾಗಿದೆ. ತಾಲೂಕು ಇಂದು ಪ್ರಗತಿ ಹೊಂದುತ್ತಿರುವುದಕ್ಕೆ ಶಾಸಕ ಹರೀಶ್ ಪೂಂಜ ಕಾರಣಕರ್ತರಾಗಿದ್ದಾರೆ. ಮೂಲಭೂತ ಸೌಕರ್ಯಗಳ ಜತೆಗೆ ಗುಣಮಟ್ಟದ ಶಿಕ್ಷಣಕ್ಕೆ ಪ್ರೋತ್ಸಾಹವನ್ನು ಶಾಸಕ ಹರೀಶ್ ಪೂಂಜ ಶ್ರಮಿಕ ಟ್ರಸ್ಟ್ ಮೂಲಕ ಮಾಡುತ್ತಿದ್ದಾರೆ ಎಂದರು.
ಬೆಳಾಲು ಸಿಎ ಬ್ಯಾಂಕ್ ಅಧ್ಯಕ್ಷ ಎಚ್. ಪದ್ಮ ಗೌಡ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್,
ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ,
ಉಜಿರೆ ಗ್ರಾ.ಪಂ. ಮಾಜಿ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪುಷ್ಪಾವತಿ ಆರ್.ಶೆಟ್ಟಿ,ಮಾಜಿ ಉಪಾಧ್ಯಕ್ಷ ರವಿಕುಮಾರ್ ಬರಮೇಲು, ಬೆಳಾಲು ಗ್ರಾ. ಪಂ. ಮಾಜಿ ಅಧ್ಯಕ್ಷೆ ವಿದ್ಯಾಶ್ರೀನಿವಾಸ್ ಗೌಡ, ಮುಂಡಾಜೆ ಗ್ರಾ. ಪಂ. ಮಾಜಿ ಅಧ್ಯಕ್ಷರಾದ ಗಣೇಶ್ ಬಂಗೇರ,ರಂಜಿನಿ, ಪ್ರಮುಖರಾದ
ಜಯಂತ್ ಗೌಡ ಗುರಿಪಳ್ಳ, ಶಶಿಧರ ಕಲ್ಮಂಜ, ಗಣೇಶ್ ನಾವೂರು,ರಾಘವ ಕಲ್ಮಂಜ,ಚೆನ್ನಕೇಶವ ಅರಸಮಜಲು, ಪೂರ್ಣಿಮಾ ಜಯಂತ್,ಪ್ರೀತಂ ಧರ್ಮಸ್ಥಳ,
ಸಿಎ ಬ್ಯಾಂಕ್ ಗಳ ಅಧ್ಯಕ್ಷರುಗಳು, ಗ್ರಾಮ ಸಮಿತಿ ಪದಾಧಿಕಾರಿಗಳು, ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು.
ಸಮೀಕ್ಷಾ ಶಿರ್ಲಾಲು ಕಾರ್ಯಕ್ರಮವನ್ನು ನಿರೂಪಿಸಿದರು.
1,500ಕ್ಕಿಂತ ಅಧಿಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

LEAVE A REPLY

Please enter your comment!
Please enter your name here