Home ಅಪಘಾತ ಚಾರ್ಮಾಡಿ ಘಾಟಿ ಐದನೇ ತಿರುವಿನಲ್ಲಿ ಕಾರಿನ ಮೇಲೆ ಬಿದ್ದ ಮರ ಕಾರಿಗೆ ಹಾನಿ

ಚಾರ್ಮಾಡಿ ಘಾಟಿ ಐದನೇ ತಿರುವಿನಲ್ಲಿ ಕಾರಿನ ಮೇಲೆ ಬಿದ್ದ ಮರ ಕಾರಿಗೆ ಹಾನಿ

0
2


ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯ ಐದನೇ ತಿರುವಿನಲ್ಲಿ ಮಳೆ-ಗಾಳಿಯ ಆರ್ಭಟಕ್ಕೆ ಭಾರಿ ಗಾತ್ರದ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಕಾರಿಗೆ ಹಾನಿ ಉಂಟಾದ ಘಟನೆ ಶನಿವಾರ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ
ಮರ ರಸ್ತೆ ಮಧ್ಯಭಾಗಕ್ಕೆ ಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಇದರಿಂದ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಮಾಹಿತಿ ತಿಳಿದ ತಕ್ಷಣ ಸಂಬಂಧಪಟ್ಟ ಇಲಾಖೆಯ ಸಿಬ್ಬಂದಿ ಹಾಗೂ ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಮರ ತೆರವು ಕಾರ್ಯಾಚರಣೆ ನಡೆಸಿದರು. ಬಳಿಕ ಸಂಚಾರವನ್ನು ಪುನಃ ಆರಂಭಿಸಲಾಯಿತು.
ಘಟನೆಯಿಂದ ಕೆಲಕಾಲ ವಾಹನ ಸವಾರರು ಪರದಾಡುವಂತಾಯಿತು.

NO COMMENTS

LEAVE A REPLY

Please enter your comment!
Please enter your name here